ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಲೋಕೋಪಯೋಗಿ ಮತ್ತು ಪ್ರವಾಸೋದ್ಯಮ ಇಲಾಖೆಗಳ ಯೋಜನೆಯಡಿ ನಿರ್ಮಾಣಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವುಕುಮಾರ. ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಅಣ್ಣಾ ಜಾರಕಹೊಳಿ, ಸಚಿವರಾದ ಲಕ್ಷ್ಮೀ ಹೇಬಾಳಕರ. ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಸವದತ್ತಿ ಶಾಸಕರಾದ ವಿಶ್ವಾಸ್ ವೈದ್ಯ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ, ನವಲಗುಂದ ಶಾಸಕರಾದ ಕೋನರೆಡ್ಡಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.