ಉತ್ತರ ಪ್ರದೇಶದಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿ ದಲಿತ ಬಾಲಕನಿಗೆ ಥಳಿಸಿರುವ ಘಟನೆ

ಉತ್ತರ ಪ್ರದೇಶ: ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿ ದಲಿತ ಬಾಲಕನಿಗೆ ಥಳಿತ

16 ವರ್ಷದ ದಲಿತ ಬಾಲಕನ ಮೇಲೆ ವಿದ್ಯಾರ್ಥಿಗಳ ಗುಂಪೊಂದು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಒತ್ತಾಯಿಸಿ ಹಲ್ಲೆ ನಡೆಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಘಟನೆಯ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದು, ಭಾರತೀಯ ನ್ಯಾಯ ಸಂಹಿತಾ ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯಗಳ ತಡೆ) ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪೊಲೀಸ್ ಸಹಾಯಕ ಆಯುಕ್ತ (ಘಟಂಪುರ) ರಂಜೀತ್ ಕುಮಾರ್ ಮಾತನಾಡಿ, “ದಲಿತ ಸಮುದಾಯಕ್ಕೆ ಸೇರಿದ ಹುಡುಗನೊಬ್ಬ ಬಿಆರ್ ಅಂಬೇಡ್ಕರ್ ಅವರ ಚಿತ್ರಗಳನ್ನು ಹೊಂದಿರುವ ಇನ್‌ಸ್ಟಾಗ್ರಾಮ್ ಸ್ಟೇಟಸ್ ಅನ್ನು ನೋಡಿದ ನಂತರ ವಿದ್ಯಾರ್ಥಿಗಳ ಗುಂಪೊಂದು ಆತನ ಮೇಲೆ ಹಲ್ಲೆ ನಡೆಸಿದೆ” ಎಂದು ಹೇಳಿದರು.

“ನಂತರ, ಬಾಲಕನಿಗೆ ‘ಜೈ ಶ್ರೀ ರಾಮ್’ ಎಂದು ಕೂಗುವಂತೆ ಒತ್ತಾಯಿಸಲಾಯಿತು. ದಾಳಿಕೋರರು ಆತನ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ. ಇದುವರೆಗೆ ಯಾವುದೇ ಬಂಧನವಾಗಿಲ್ಲ” ಎಂದು ಎಸಿಪಿ ತಿಳಿಸಿದ್ದಾರೆ”

 

ವರದಿ : ಸದಾನಂದ ಎಂ 

error: Content is protected !!