ಭಾರತೀಯ ಜನತಾ ಪಕ್ಷದ ಸಕ್ರಿಯ ಸದಸ್ಯತ್ವ ಅಭಿಯಾನಕ್ಕೆ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಸಕ್ರೀಯ ಸದಸ್ಯತ್ವದ ಅರ್ಜಿಯನ್ನು ಪಕ್ಷದ ಜಿಲ್ಲಾಧ್ಯಕ್ಷರಿಗೆ ಸಲ್ಲಿಸುವ ಮೂಲಕ ಮೂಲಕ ಔರಾದ(ಬಿ) ವಿಧಾನಭಾ ಕ್ಷೇತ್ರದಲ್ಲಿ ವಿಭಿನ್ನವಾಗಿ ಚಾಲನೆ ನೀಡಿದರು.
ಪಟ್ಟಣದ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಅ.22ರಂದು ಭಾರತೀಯ ಜನತಾ ಪಕ್ಷ ಔರಾದ(ಬಿ) ಮಂಡಲ ಕಾರ್ಯಕರ್ತರ ಸಮಾವೇಶ ಹಾಗೂ ಸಕ್ರಿಯ ಸದಸ್ಯತಾ ಅಭಿಯಾನ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕರು ಪಕ್ಷದ ಎಲ್ಲ ಕಾರ್ಯಕರ್ತರಿಗೆ ಶಾಲು ಹೊದಿಸಿ ಪುಷ್ಪಗಳನ್ನು ಸುರಿದು ಗೌರವಿಸಲಾಯಿತು. ಇದೇ ವೇಳೆ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಹೆಚ್ಚು ಸದಸ್ಯರನ್ನು ನೋಂದಾಯಿಸಿದ ಕಾರ್ಯಕರ್ತರಿಗೆ ವಿಶೇಷ ಸನ್ಮಾನ ನಡೆಯಿತು. ಶಾಸಕರು ಶಾಲು ಹೂ-ಹಾರಗಳೊಂದಿಗೆ ಅಭಿನಂದನಾ ಪತ್ರಗಳನ್ನು ನೀಡಿ ಗೌರವಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ಪಕ್ಷ ನನಗೆ ತಾಯಿ ಇದ್ದಂತೆ, ಕಾರ್ಯಕರ್ತರು ಕುಟುಂಬದ ಸದಸ್ಯರಿದ್ದಂತೆ ಅವರನ್ನು ಸದಾ ಗೌರವಿಸುತ್ತಾ ಬಂದಿದ್ದೇನೆ. ಇವರ ಸಹಕಾರದಿಂದಲೇ ಪಕ್ಷದ ಎಲ್ಲ ಕಾರ್ಯಚಟುವಟಿಕೆಗಳು ಸರಿಯಾಗಿ ನಡೆಯುತ್ತಿವೆ. ಕಾರ್ಯಕರ್ತರು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ ಎಂದೂ ಮರೆಯಲು ಸಾಧ್ಯವಿಲ್ಲ. ಯಾವುದೇ ಕೆಲಸವಿರಲಿ ಉತ್ಸಾಹ ಮತ್ತು ಶ್ರದ್ಧೆಯಿಂದ ಮಾಡುತ್ತಾರೆ. ಅವರನ್ನು ಗೌರವಿಸುವುದೆಂದು ನನಗೆ ಹೆಚ್ಚಿನ ಸಂತೋಷ ನೀಡುತ್ತದೆ ಎಂದರು.
ಸದಸ್ಯತ್ವ ಅಭಿಯಾನದಲ್ಲಿ ಔರಾದ(ಬಿ) ಕ್ಷೇತ್ರದಲ್ಲಿ 1.20 ಲಕ್ಷ ಸದಸ್ಯರ ನೋಂದಣಿಯ ಗುರಿ ಹೊಂದಲಾಗಿತ್ತು. ಈವರೆಗೆ 95 ಸಾವಿರ ಸದಸ್ಯರನ್ನು ಸೇರ್ಪಡೆ ಮಾಡಲಾಗಿದೆ. ಇನ್ನು ಒಂದು ವಾರ ಕಾಲಾವಕಾಶವಿದ್ದು, ಅಲ್ಲಿಯವರೆಗೆ ಗುರಿ ಸಾಧಿಸಲಾಗುವುದೆಂದು ವಿಶ್ವಾಸ ವ್ಯಕ್ತಪಡಿಸಿದರು.
ಕನಿಷ್ಠ 50 ಜನ ಸದಸ್ಯರನ್ನು ಸೇರ್ಪಡೆ ಮಾಡಿದವರಿಗೆ ಸಕ್ರೀಯ ಕಾರ್ಯಕರ್ತರಾಗಲು ಸಾಧ್ಯವಿದೆ. ಸಕ್ರೀಯ ಕಾರ್ಯಕರ್ತರಿಗೆ ಮುಂದಿನ ದಿನಗಳಲ್ಲಿ ಪಕ್ಷವು ಜಜಾಬ್ದಾರಿ ಹಂಚಿಕೆ, ನಾಮನಿರ್ದೇಶನ ಹಾಗೂ ಮತ್ತಿತರೆ ಸಂದರ್ಭಗಳಲ್ಲಿ ಮನ್ನಣೆ ಸಿಗುವುದರಿಂದ ಕಾರ್ಯರ್ಕರೆಲ್ಲರೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಸದಸ್ಯತ್ವ ಅಭಿಯಾನದಂತೆ ಸಕ್ರಿಯ ಸದಸ್ಯತ್ವ ಅಭಿಯಾನವು ಯಶಸ್ವಿಯಾಗಿ ನಡೆಯಬೇಕು. ಔರಾದ(ಬಿ) ಕ್ಷೇತ್ರ ರಾಜ್ಯದ ಅಗ್ರ ಸ್ಥಾನದಲ್ಲಿರಬೇಕು ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಮಾತನಾಡಿ, ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ತಮ್ಮ ಶ್ರಮದಿಂದಾಗಿ ಪಕ್ಷದ ಕಾರ್ಯಚಟುವಟಿಕೆಗಳು ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ತಿಳಿಸಿದರು. ಸಕ್ರಿಯ ಸದಸ್ಯತ್ವ ಅಭಿಯಾನ ನಡೆಸುವ ವಿಧಾನಗಳ ಕುರಿತು ಮಾಹಿತಿ ನೀಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ ಪಾಟೀಲ, ಪೀರಪ್ಪ ಔರಾದೆ, ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಗುಂಡಪ್ಪ ಬಿರಾದಾರ, ಎಪಿಎಂಸಿ ಅಧ್ಯಕ್ಷ ಧೊಂಡಿಬಾ ನರೋಟೆ, ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಸರಸ್ವತಿ ವೈಜಿನಾಥ ಘೂಳೆ, ಉಪಾಧ್ಯಕ್ಷರಾದ ರಾಧಾಬಾಯಿ ಕೃಷ್ಣ ನರೋಟೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾದೇವ ಹುಸುರೆ, ಮಂಡಲ ಪ್ರಭಾರಿ ಮಹೇಶ್ವರ ಸ್ವಾಮಿ, ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಶಿವರಾಜ ಅಲ್ಮಾಜೆ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯಲಕ್ಷಿö್ಮÃ ಕೌಟಗೆ, ಮೈನಾರಿಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಝಾಕೀರ್ ಶೇಖ್, ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ನೀಲೇಶ ರಕ್ಷಾö್ಯಳೆ, ಹಿರಿಯ ಪ್ರಕೋಷ್ಟ ರಾಜ್ಯ ಸದಸ್ಯ ಬಸವರಾಜ ಪಾಟೀಲ, ಮೈನಾರಿಟಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಖಾಜಾಮಿಯ್ಯಾ ಶೇಖ್, ಪಶು ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದ ನಾಮ ನಿರ್ದೇಶಿತ ಸದಸ್ಯ ವಸಂತ ಬಿರಾದಾರ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಖಂಡೋಬಾ ಕಂಗಟೆ, ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳ ಪ್ರಮುಖರು, ಮುಖಂಡರು ಹಾಗೂ ಸುಮಾರು ಎರಡು ಸಾವಿರ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದರು.
ವರದಿ : ರಾಚಯ್ಯ ಸ್ವಾಮಿ