ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗಕ್ಕೆ ಸಂಬಂಧಿಸಿದ ಸಮಸ್ಯೆಗಳ ದುರುಗಳು ಬಂದರೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಅವರು ಶುಕ್ರವಾರ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ನೇತೃತ್ವದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದರು
ಸ್ಮಶಾನ ಭೂಮಿ ಮಂಜೂರು, ಭವನಗಳ ನಿರ್ಮಾಣ, ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯ, ವಿದ್ಯಾರ್ಥಿ ವೇತನ , ಸುಳ್ಳು ಜಾತಿ ಪ್ರಕರಣ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಸುಮಾರು ಮನವಿಗಳು ಬಂದಿವೆ ಅವುಗಳ ಕುರಿತು ಶೀಘ್ರದಲ್ಲಿ ಕ್ರಮವಹಿಸಲಾಗುವುದು ಎಂದರು.
ಸಭೆಯಲ್ಲಿ ಸುಮಾರು 200 ಕ್ಕೂ ಹೆಚ್ಚು ವಿವಿಧ ದಲಿತ ಸಂಘರ್ಷ ಸಮಿತಿ ಸಂಘಟನೆಯ ಮುಖಂಡರುಗಳು, ಸಾರ್ವಜನಿಕರು ಆಗಮಿಸಿ ತಮ್ಮ ಕುಂದು ಕೊರತೆ, ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕೆಲವು ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.ಕೆಲವೊಂದು ಸಮಸ್ಯೆಗಳಿಗೆ ಸಂಬಂಧಪಟ್ಟ ಇಲಾಖೆಗೆ ವರ್ಗಾಯಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಬೀದರ ಸಹಾಯಕ ಆಯುಕ್ತ ಶಕೀಲ್ ಅಹ್ಮದ, ಬಸವಕಲ್ಯಾಣ ಸಹಾಯಕ ಆಯ್ತುಕ್ತ ಮುಕುಲ್ ಜೈನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ್ ಮೇಘಣ್ಣನವರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಸಿಂಧು ಎಚ್.ಎಸ್. ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಶಿವಮಾನಪ್ಪ, ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು