ಹುಕ್ಕೇರಿ ರಾಜ್ಯದಲ್ಲಿ ಜರಗುತ್ತಿರುವ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಗಳಾಗುತ್ತಾರೆ
ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೋಳಿ ಹೇಳಿದರು.
ಹುಕ್ಕೇರಿ ನಗರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ರಾಜ್ಯದಲ್ಲಿ ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಗಳಾಗುವದು ಖಚಿತ.
ಕಾಂಗ್ರೆಸ್ ಪಕ್ಷದ ಜನಪರ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಿ ಆರ್ಥಿಕವಾಗಿ ಸಬಲರಾಗಿಸಿದೆ ಅಲ್ಲದೆ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಗಲಿರಳು ಕ್ಷೇತ್ರದ ಜನತೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಇದರಿಂದ ನಮ್ಮ ಗೆಲವು ಸುಲಭವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಹುಕ್ಕೇರಿ ಪುರಸಭೆ ಅದ್ಯಕ್ಷ ಇಮ್ರಾನ ಮೋಮಿನ, ಸಲಿಂ ನದಾಫ್, ಕಬೀರ ಮಲ್ಲಿಕ, ಸಲಿಂ ಕಳಾವಂತ , ಶಾಹಜಾನ ಬಡಗಾಂವಿ ಮೊದಲಾದವರು ಉಪಸ್ಥಿತರಿದ್ದರ
ವರದಿ /ಸದಾನಂದ್ ಎಚ