ಬೀದ‌ರ್ | ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ವಿದ್ಯಾರ್ಥಿಗೆ ಗಂಭೀರ ಗಾಯ: ಗ್ರಾಮಸ್ಥರ ಪ್ರತಿಭಟನೆ

ಬೀದರ ರಾಷ್ಟ್ರೀಯ ಹೆದ್ದಾರಿ ‘161ಎ’ಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜೀರ್ಗಾ (ಬಿ) ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಜೀರ್ಗಾ(ಬಿ) ಗ್ರಾಮದ ವಿದ್ಯಾರ್ಥಿ ವಿಕಾಸ ಸೋಪಾನ (14) ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಬೀದರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಔರಾದ ಕಡೆಯಿಂದ ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿ 10 ಅಡಿ ಹಾರಿ ಬಿದಿದ್ದಾರೆ. ಘಟನೆಯು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.

ಗ್ರಾಮಸ್ಥರ ಪ್ರತಿಭಟನೆ : ಅಪಘಾತ ಸಂಭವಿಸಿದನ್ನು

ಖಂಡಿಸಿ ಗ್ರಾಮಸ್ಥರು ಹೆದ್ದಾರಿಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ವಿದ್ಯಾರ್ಥಿಗೆ ಪರಿಹಾರ ಒದಗಿಸಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಹಂಪ್ಸ್ ಹಾಕಬೇಕು. ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಶೀಘ್ರವೇ ಕಾಮಗಾರಿ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಔರಾದ್ ತಹಶೀಲ್ದಾರ್ ಮಲ್ಲಶೆಟ್ಟಿ ಚಿದ್ರೆ, ಸಿಪಿಐ ಆರ್.ಕೆ ಠಾಕೂರ್, ಸಂತಪೂರ ಠಾಣೆ ಪಿಎಸ್‌ಐ ನಂದಕುಮಾ‌ರ್ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ.

 

ವರದಿ : ಜಾನ್ಸನ್ ಉಜನಿ 

error: Content is protected !!