ವಿಜಯಪುರ: ಜಿಲ್ಲೆಯ ತಿಕೋಟ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ ಆಚರಿಸಲಾಯಿತು.
ಕಾಲೇಜಿನ ಪ್ರಾಚಾರ್ಯರಾದ ಮದು ಲಮಾಣಿ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ‘ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚಿಸಿ, ನ.26, 1949 ರಂದು ದೇಶಕ್ಕೆ ಕೊಡುಗೆಯಾಗಿ ನೀಡಿದ್ದು, ಆ ದಿನವನ್ನ ಸಂವಿಧಾನ ಸಮರ್ಪಣಾ ದಿನವಾಗಿ ಆಚರಿಸಲಾಗುತ್ತಿದೆ. ದೇಶದ ಪ್ರತಿಯೊಬ್ಬ ಪ್ರಜೆಗೆ ಸಂವಿಧಾನ ದಾರಿದೀಪ. ಕಾನೂನು, ನ್ಯಾಯ, ನೀತಿ, ಸಮಾನತೆ, ಸಹಬಾಳ್ವೆ ತತ್ವಗಳ ತಳಹದಿಯ ಮೇಲೆ ನಿಂತಿದ್ದು, ಎಲ್ಲರೂ ಸಂವಿಧಾನವನ್ನು ಗೌರವಿಸಿ, ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು’ ಎಂದರು.
ನಂತರ ಕಿರಿಯ ತರಬೇತಿ ಅಧಿಕಾರಿಗಳಾದ ನಾರಾಯಣ ಮೇತ್ರಿ ಅವರು ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಬೋಧಿಸುವ ಮೂಲಕ ಚಾಲನೆ ನೀಡಲಾಯಿತು.
ಇದಕ್ಕು ಮುನ್ನ ಕಾಲೇಜಿನ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಹಾಗೂ ಸಂವಿಧಾನ ಪೀಠಿಕೆಗೆ ಹೂವಿನ ಹಾರಹಾಕಿ, ಸಂವಿಧಾನ ಸಮರ್ಪಣಾ ದಿನ ಆಚರಿಸಿದರು
ಇದೇ ಸಂದರ್ಭದಲ್ಲಿ ಕಿರಿಯ ತರಬೇತಿ ಅಧಿಕಾರಿಗಳಾದ ದಾನಯ್ಯಾ ಹಿರೇಮಠ, ಶಿವಪ್ಪ ಚಪ್ಪರ, ಅನಿಲ ಕಲಾಲ ಸೇರಿದಂತೆ ಸಂಸ್ಥೆಯ ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ತರಬೇತಿದಾರರು ಹಾಜರಿದ್ದರು.
ವರದಿ : ದೌಲಪ್ಪ ಮನಗೋಳಿ