ಕೊಳ್ಳುರ್ ಗ್ರಾಮದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ

ಔರಾದ್ ತಾಲೂಕಿನ ಕೊಳ್ಳುರ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ ಕೆ ಡಿ ಆರ್ ಡಿಪಿ ವತಿಯಿಂದ ಗುರುವಾರ ಏರ್ಪಡಿಸಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಜಿಲ್ಲಾ ಜನಜಾಗ್ರತಿ ವೇದಿಕೆ ಸದಸ್ಯ ಮಲ್ಲಪ್ಪ ಗೌಡಾ ಜ್ಯೋತಿ ಬೆಳಗಿಸಿ ಮಾತನಾಡಿದರು. ಮುಖ್ಯಗುರು ಸುರೇಶ ಪಾಂಡ್ರೆ, ರಿಯಾಜ್ ಪಾಶಾ, ಲಕ್ಷಿö್ಮಕಾಂತ, ಪ್ರಕಾಶ, ಶಾಂತಕುಮಾರ್, ಕವಿತಾ, ಮೀಲನ್, ಶ್ರೀದೇವಿ, ವಿಜಯಲಕ್ಷಿö್ಮ, ಅಂಬಿಕಾ, ಇತರರಿದ್ದರು.

ಔರಾದ್

ಮಾದಕ ವ್ಯಸನದಿಂದ ಇಂದಿನ ದಿನಗಳಲ್ಲಿ ಅತ್ಯಂತ ಹೆಚ್ಚು ಯುವ ಸಮೂಹವೇ ಬಲಿಯಾಗುತ್ತಿರುವುದು ದುರಂತದ ಸಂಗತಿಯಾಗಿದೆ . ಇದನ್ನು ತಡೆಗಟ್ಟುವಲ್ಲಿ ಎಲ್ಲರು ಕೈಜೋಡಿಸುವ ಅಗತ್ಯವಿದೆ ಎಂದು ಜಿಲ್ಲಾ ಜನಜಾಗ್ರತಿ ವೇದಿಕೆ ಸದಸ್ಯ ಮಲ್ಲಪ್ಪ ಗೌಡಾ ಹೇಳಿದರು.

ತಾಲೂಕಿನ ಕೊಳ್ಳುರ ಸರಕಾರಿ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) , ಸ್ಥಳೀಯ ಸರ್ಕಾರಿ ಪ್ರೌಢಶಾಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಈ ವಿಷಯದ ಕುರಿತಂತೆ ದುಶ್ಚಟ ದುರಭ್ಯಾಸದಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರದಲ್ಲಿ ಮಾತನಾಡಿದ ಅವರು, ಯುವ ಪೀಳಿಗೆ ಮಾದಕ ದ್ರವ್ಯ, ಮಾದಕ ವ್ಯಸನ ಅಥವಾ ಇನ್ನಿತರ ಚಟಗಳಿಂದ ಬಲಿಯಾಗುತ್ತಿರುವುದು ಶೋಚನೀಯವಾಗಿದೆ. ವಿದ್ಯಾರ್ಥಿಗಳ ವಯಸ್ಸು ಹದಿಹರೆಯದ ವಯಸ್ಸು. ವಿದ್ಯಾರ್ಥಿ ಜೀವನ ಹಸಿ ಮಣ್ಣಿನ ಮಡಿಕೆ ಇದ್ದ ಹಾಗೆ . ಹದಿಹರೆಯದಲ್ಲಿನ ಅನೇಕ ಒತ್ತಡಗಳಿಂದ ಮತ್ತು ನಕಾರಾತ್ಮಕ ಚಿಂತನೆಗಳಿAದ ಅಮಲು ಪದಾರ್ಥ ಹಾಗೂ ಇನ್ನಿತರ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ. ಆರೋಗ್ಯವಂತ ಶರೀರವೇ ಆತ್ಮದ ಅರಮನೆ ಅನಾರೋಗ್ಯವಂತ ಶರೀರವೇ ಆತ್ಮದ ಸೆರೆಮನೆ. ಆರೋಗ್ಯ ಪೂರ್ಣ ಸಮಾಜ ಅಥವಾ ದುಶ್ಚಟಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆಯಾಗಿದೆ ಎಂದರು.

ಜೀವ ವೈವಿದ್ಯ ಪ್ರಶಸ್ತಿ ಪುರಸ್ಕçತ ಪರಿಸರ ಪ್ರೇಮಿ ರಿಯಾಜ್ ಪಾಶಾ ಕೊಳ್ಳುರ್ ಮಾತನಾಡಿ, ಸಮಾಜದಲ್ಲಿ ವ್ಯಸನಕ್ಕೆ ಬಲಿ ಬಿದ್ದವರಿಗೆ ಅಪಘಾತ, ಆತ್ಮಹತ್ಯೆ ಮತ್ತು ಅಕಾಲಿಕ ಮರಣ ಇವುಗಳು ಸರ್ವೇ ಸಾಮಾನ್ಯ. ಮಕ್ಕಳು ಅತಿಯಾದ ಮೊಬೈಲ್ ಬಳಕೆ ಮತ್ತು ಸಾಮಾಜಿಕ ಜಾಲತಾಣದಿಂದಲೂ ವಿದ್ಯಾರ್ಥಿಗಳ ಮನೋಸ್ಥಿತಿ ಹಾಳಾಗುತ್ತದೆ, ವಿದ್ಯಾರ್ಥಿಗಳು ಇದರ ಬಗ್ಗೆಯೂ ಗಮನ ಹರಿಸಬೇಕು. ಇವುಗಳಿಂದ ಹೊರಬರಲು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಎಚ್ಚೆತ್ತುಕೊಳ್ಳುವ ಅವಶ್ಯಕತೆಯಿದೆ. ಇದನ್ನು ತಡೆಗಟ್ಟಲು ಎಲ್ಲರು ಸಂಕಲ್ಪ ಮಾಡಬೇಕಾಗಿದೆ ಎಂದರು.

ಮುಖ್ಯಗುರು ಸುರೇಶ ಪಾಂಡ್ರೆ ಮಾತನಾಡಿದರು. ಪ್ರಕಾಶ, ಶಾಂತಕುಮಾರ್, ಮೀಲನ್, ಶ್ರೀದೇವಿ, ವಿಜಯಲಕ್ಷಿö್ಮ, ಅಂಬಿಕಾ, ಇತರರಿದ್ದರು. ಕವಿತಾ ವಂದಿಸಿದರು. ವಲಯ ಮೇಲ್ವಿಚಾರಕ ಲಕ್ಷಿö್ಮಕಾಂತ ನಿರೂಪಣೆ ಮಾಡಿದರು.

 

ವರದಿ : ರಾಚಯ್ಯ ಸ್ವಾಮಿ 

error: Content is protected !!