ವಿಜಯಪುರ ನಗರದ ವಾ.ನಂ33 ರಲ್ಲಿ ಬರುವ ಜೈನಾಪುರ ಮುಳಗಡೆ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಮನೆಗೆ ನುಗ್ಗಿದ ದರೋಡೆಕೋರರ ಗುಂಪೊಂದು ಮನೆಯ ಮಾಲೀಕ ಸಂತೋಷ ಕನ್ನಾಳ ಅವರಿಗೆ ಚಾಕು ಇರಿದಿದ್ದರಿಂದ ಗಂಭೀರವಾಗಿ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ. ಬಸವನಗೌಡ ಪಾಟೀಲ ಯತ್ನಾಳ ಭೇಟಿ ನೀಡಿ ಆರೋಗ್ಯ ವಿಚಾರಿಸಲಾಯಿತು.
ವಾರ್ಡ್ ಮುಖಂಡರಾದ ವಿಠ್ಠಲ ನಡುವಿನಕೇರಿ, ನಗರ ಮಂಡಲ ಅಧ್ಯಕ್ಷರಾದ ಶಂಕರ ಹೂಗಾರ, ಮಹಾನಗರ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ, ಪ್ರೇಮಾನಂದ ಬಿರಾದಾರ, ಗಿರೀಶ ಪಾಟೀಲ, ಮುಖಂಡರಾದ ಪಾಂಡುಸಾಹುಕಾರ ದೊಡಮನಿ ಸೇರಿದಂತೆ ಮತ್ತಿತರರು ಇದ್ದರು.
ವರದಿ : ಅಝೀಜ್ ಪಠಣ