ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅಧ್ಯಕ್ಷತೆಯಲ್ಲಿ ಬೀದರ್ ಜಿಲ್ಲಾ ಪಂಚಾಯತಿ ಸಭಾಂಗಣ ದಲ್ಲಿ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು,
ಸಭೆಯಲ್ಲಿ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ, ಸಂಸದರಾದ ಸಾಗರ ಖಂಡ್ರೆ, ವಿವಿಧ ಜನಪ್ರತಿನಿಧಿಗಳು, ಹಾಗೂ ಇಂಧನ ಇಲಾಖೆಯ ವಿಭಾಗ ಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಬೀದರ ಜಿಲ್ಲೆಯ ಇಂಧನ ಇಲಾಖೆಯ ಕಾಮಗಾರಿ, ವಿಶೇಷವಾಗಿ 110 ಕೆವಿ ಉಪಕೇಂದ್ರ ನಿರ್ಮಾಣ ಹಾಗೂ ಇತರ ಬಾಕಿ ಕೆಲಸಗಳನ್ನು ತುರ್ತು ಆದ್ಯತೆಯ ಮೇಲೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಇದಲ್ಲದೆ, ಜಿಲ್ಲೆಯಲ್ಲಿ ವಿದ್ಯುತ್ ಸರಬರಾಜು ಸುಧಾರಣೆ, ಗ್ರಾಮೀಣ ಪ್ರದೇಶಗಳಲ್ಲಿ ಲೋಡ್ ಶೆಡ್ಡಿಂಗ್ ಕಡಿತಗೊಳಿಸಲು ಹಾಗೂ ಹೊಸ ಯೋಜನೆಗಳ ಅನುಷ್ಠಾನ ಕುರಿತು ಸಮಗ್ರ ಚರ್ಚೆ ನಡೆಯಿತು.