ಮಹಾ ಕುಂಭ ಮೇಳದಲ್ಲಿ ಮೃತರ ಕುಟುಂಬಕ್ಕೆ ವಯಕ್ತಿಕವಾಗಿ ಸತೀಶ್ ಜಾರಕಿಹೊಳಿ ಯವರಿಂದ 2 ಲಕ್ಷ ರೂ ಪರಿಹಾರ

ಬೆಳಗಾವಿ ಚಿಕ್ಕೋಡಿ ಲೋಕಸಭಾ ಸದಸ್ಯರಾದ ಪ್ರಿಯಾಂಕ ಜಾರಕಿಹೊಳಿ ಅವರು ಪ್ರಯಾಗರಾಜ್ ಮಹಾಕುಂಭ ಮೇಳದಲ್ಲಿ ದುರದೃಷ್ಟವಶಾತ್ ಸಂಭವಿಸಿದ ಅವಘಡದಲ್ಲಿ ಮೃತಪಟ್ಟ ಬೆಳಗಾವಿಯ ನಿವಾಸಿಗಳ ಕುಟುಂಬ ಸದಸ್ಯರಿಗೆ ಇಂದು ಸಾಂಬ್ರಾ ವಿಮಾನ‌ ನಿಲ್ದಾಣದಲ್ಲಿ ಭೇಟಿಯಾಗಿ ಸಾಂತ್ವನ ಹೇಳಿದರು.

ಮಹಾಕುಂಭ ಮೇಳದಲ್ಲಿ ಸಂಭವಿಸಿದ ಘಟನೆಗೆ ಪ್ರಿಯಾಂಕಾ ಜಾರಕಿಹೊಳಿ ಯವರು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿ ಅವರಿಗೆ ಸಮಾದಾನ ತಿಳಿಸಿದರು,

ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರವನ್ನು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ವೈಯಕ್ತಿಕವಾಗಿ ನೀಡುವುದಾಗಿ ಘೋಷಿಸಿದ್ದು,

ರಾಜ್ಯ ಸರ್ಕಾರದಿಂದಲೂ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮೃತರ ಕುಟುಂಬದವರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪ್ರಿಯಾಂಕಾ ಜಾರಕಿಹೊಳಿ ಯವರು ಮತ್ತಿತರರು ಉಪಸ್ಥಿತರಿದ್ದರು.

 

ವರದಿ/ಸದಾನಂದ್ ಎಚ್

error: Content is protected !!