ಗೃಹಲಕ್ಷ್ಮಿ ಮಾಸಿಕ ಹಣ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಚಿಂತನೆ

 

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಕೂಡಲೇ ಪ್ರಮುಖ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾಗಿದ್ದು, ಮನೆಯ ಯಜಮಾನತಿಗೆ ತಿಂಗಳಿಗೆ ರೂ.2000 ಅವರ ಖಾತೆಗೆ ಜಮೆ ಆಗುತ್ತದೆ. ಇದೀಗ ಈ ಒಂದು ಮಾಸಿಕ ಹಣದಲ್ಲಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

 

ಹೌದು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗಾಗಲೇ 2 ಸಾವಿರ ಹಣ ಮಹಿಳೆಯರ ಖಾತೆಗೆ ಹಾಕಲಾಗುತ್ತಿದ್ದೂ, ಅತೀ ಶೀಘ್ರದಲ್ಲಿ ಗೃಹಲಕ್ಷ್ಮಿಯರ ಮಾಸಿಕ ಹಣ ಹೆಚ್ಚಳ ಸಾಧ್ಯತೆ ಇದೆ ಎನ್ನಲಾಗಿದೆ.ಇದೀಗ 2000 ರೂ. ಮಾಸಿಕವಾಗಿ ನೀಡಲಾಗುತ್ತಿದೆ. ಅದನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್‌ 7ರಂದು ರಾಜ್ಯ ಬಜೆಟ್‌ ಮಂಡನೆಯಾಗಲಿದೆ.

ಈ ವೇಳೆ ಗೃಹಲಕ್ಷ್ಮಿಯರ ಮಾಸಿಕ ಹಣ 2000 ರೂ.ನಿಂದ 2300 ರೂ. ವರೆಗೆ ಹೆಚ್ಚಿಸುವ ಸಾಧ್ಯತೆ ಇದೆ. ರಾಜ್ಯದ ಒಟ್ಟು ಆರ್ಥಿಕ ಸ್ಥಿತಿ ಪರಿಗಣಿಸಿ ಸಿಎಂ ಸಿದ್ದರಾಮಯ್ಯ ಇದರ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ. ಹಾಗಾಗಿ ಮಾರ್ಚ್ 7 ರಂದು ನಡೆಯುವ ಬಜೆಟ್ ಮಂಡನೆಯಲ್ಲಿ ಗೃಹಲಕ್ಷ್ಮಿಯರ ರೂ.2000 ಹಣ ಹೆಚ್ಚಳ ಆಗುತ್ತಾ ಇಲ್ಲವ ಎನ್ನುವುದನ್ನು ಕಾದು ನೋಡಬೇಕಾಗಿದೆ.

error: Content is protected !!