ವನಮಾರಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬ

ಔರಾದ್ : ಕಲಿಕೆ ಎನ್ನುವುದು ನಿರಂತರವಾಗಿದ್ದು, ವೃತ್ತಿ, ಜ್ಞಾನ ಸೇರಿದಂತೆ ಮಕ್ಕಳ ಉತ್ತಮ ಬೆಳವಣಿಗೆಗೆ ಸಹಕಾರಿಯಾಗಿದೆ. ಅದೇ ರೀತಿ ಕಲಿಕಾ ಹಬ್ಬವು ಮಕ್ಕಳಲ್ಲಿ ಹೊಸ ಉತ್ಸಾಹ ಮೂಡಿಸುತ್ತದೆ ಎಂದು ಬಾದಲಗಾಂವ ಗ್ರಾಪಂ ಅಧಿಕಾರಿ ದತ್ತಾತ್ರಿ ಪಾಟೀಲ್ ಹೇಲಿದರು.

ಗಡಿಗೆ ಅಂಟಿಕೊಂಡಿರುವ ವನಮಾರಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳು ಕಲಿಕಾ ಹಬ್ಬದಲ್ಲಿ ಭಾಗವಹಿಸುವ ಮೂಲಕ ಪ್ರತಿಭೆ ಪ್ರದರ್ಶಿಸಬೇಕು ಎಂದರು.

ಸರ್ಕಾರಿ ನೌಕರ ಸಂಘದ ನಿರ್ದೇಶಕ ಬಾಲಾಜಿ ಬಿರಾದಾರ್ ಮಾತನಾಡಿ, ಕಿರಿಯ ಪ್ರಾಥಮಿಕ ವಿಭಾಗದ ಮಕ್ಕಳ ಕಾರ್ಯಕ್ರಮವಾಗಿದ್ದು, ಒಳಾಂಗಣ ಮತ್ತು ಹೊರಾಂಗಣ ಮೋಜಿನ ಆಟಗಳು, ಸಂವಾದಾತ್ಮಕ ಅವಧಿಗಳು ಮತ್ತು ಕಲೆ ಕುಶಲತೆ ಆಧಾರಿತ ಸೃಜನಾತ್ಮಕ ಚಟುವಟಿಕೆಯನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ಸಂತೋಷದಾಯಕ ಮತ್ತು ಅನುಭವಯುಕ್ತ ಕಲಿಕೆಗೆ ಒತ್ತು ನೀಡಲಾಗಿದೆ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಂಜೀವ ಮೇತ್ರೆ ಮಾತನಾಡಿ, ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆ ಅನೇಕ ಯೋಜನೆಗಳನ್ನು ರೂಪಿಸುತ್ತಿದೆ. ಕಲಿಕಾ ಹಬ್ಬದಿಂದ ಮಕ್ಕಳಲ್ಲಿ ಶೈಕ್ಷಣಿಕ ಬಲವರ್ಧನೆ, ಸಂಖ್ಯಾಜ್ಞಾನ ಹೆಚ್ಚಿಸುತ್ತದೆ ಎಂದರು.

ಕಸಾಪ ಅಧ್ಯಕ್ಷ ಬಿ.ಎಂ ಅಮರವಾಡಿ ಮಾತನಾಡಿ, ಎಫ್‌ಎಲ್‌ಎನ್ ಕಲಿಕಾ ಹಬ್ಬ ಮಕ್ಕಳಲ್ಲಿ ನೆನಪಿನ ಶಕ್ತಿ ವೃದ್ಧಿಸುವ ಪೂರಕ ಚಟುವಟಿಕೆಗಳಿಗೆ ಒತ್ತು ನೀಡುತ್ತದೆ. ಸರ್ಕಾರಿ ಶಾಲೆಗಳು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಚಿಂತನೆ ಮಾಡಬೇಕಿದೆ ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ಸಂಜುಕುಮಾರ್ ಬಿರಾದಾರ್, ಗ್ರಾಪಂ ವಿಜಯಕುಮಾರ ಬಿರಾದಾರ, ಪ್ರಕಾಶ ವಾಘಮಾರೆ, ಸರ್ಕಾರಿ ನೌಕರ ಸಂಘದ ನಿರ್ದೇಶಕ ಶಿವಾನಂದ ಸ್ವಾಮಿ, ಅಜೀಂ ಪ್ರೇಮ್‌ಜಿ ಫೌಂಡೇಶನ್‌ನ ಶಿವಾಜಿ ಬಿರಾದಾರ, ಚಂದ್ರಶೇಖರ ಪಾಟೀಲ್ ಮಾತನಾಡಿದರು. ಸಿಆರ್‌ಪಿ ರಮೇಶ ಢೋಣೆ, ವನಮಾರಪಳ್ಳಿ ಶಾಲೆ ಮುಖ್ಯ ಶಿಕ್ಷಕ ಮಹಾದೇವ ಭಾಲೇಕರ್, ಮಾರ್ತಮ್ಮ ಮಾಳಗೆ, ಕೈಲಾಸಪತಿ ಕೇದಾರೆ, ಮಾರುತಿ ಚವ್ಹಾಣ, ಸುರೇಶ ಕಾಳೆ, ನಾಗಮ್ಮ ಹೊಂಡಾಳೆ ಸೇರಿದಂತೆ ಇನ್ನಿತರರು ಇದ್ದರು.

error: Content is protected !!