ಕಲ್ಮಾಲ: ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೊಟ್ ಬುಕ್ ವಿತರಣೆ

ಮಕ್ಕಳಿಗೆ ಆಸ್ತಿಯನ್ನು ಮಾಡಬೇಡಿ, ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಿ : ಜಿ.ಕೆ. ನಾಗರಾಜ್ 

 

ರಾಯಚೂರು:

ಸರಕಾರಿ ಶಾಲೆಗಳ ಬಗ್ಗೆ ಪೋಷಕರಲ್ಲಿ ಇರುವ ಕೀಳರಿಮೆಯನ್ನು ಹೋಗಲಾಡಿಸುವ ಕೆಲಸ ಮೊದಲಿಗೆ ಆಗಬೇಕು, ಅದಕ್ಕೆ ತಕ್ಕಂತೆ ಮೂಲ ಸೌಕರ್ಯಗಳು ಹೆಚ್ಚಬೇಕು ಎಂದು ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರೆಮ್ ಜಿ.ಕೆ. ನಾಗರಾಜ್ ಅವರು ಅಭಿಪ್ರಾಯಪಟ್ಟರು.

ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜಿ.ಕೆ. ನಾಗರಾಜ್ ಅವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಜನತಾ ಕಾಲೋನಿ ಕಲ್ಮಲಾ 100 ವಿಧ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ವೇಳೆ ಮುಖ್ಯ ಗುರುಗಳಾದ ಜಯಶ್ರೀ ಪಾಳೇಕರ್ ಜಿ.ಕೆ. ನಾಗರಾಜ್ ಅವರನ್ನು ಶಾಲೆಗೆ ಮುಕ್ತವಾಗಿ ಬರಮಾಡಿಕೊಂಡರು. ನಂತರ ಅವರೊಂದಿಗೆ 100 ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು. ನಂತರ ಮಾತನಾಡಿದ ಜಿ.ಕೆ. ನಾಗರಾಜ್ ಅವರು ಪ್ರತಿ ವರ್ಷ ಗಣರಾಜ್ಯೋತ್ಸವ ದಿನದಂದು. ಮತ್ತು ಸ್ವಾತಂತ್ರ್ಯ ದಿನಾಚರಣೆಯ ದಂದು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ದಂದು ರಾಯಚೂರು ತಾಲೂಕಿನ ಗ್ರಾಮೀಣ ವಿಧಾನಸಭ ಕ್ಷೇತ್ರದಲ್ಲಿ ಬರುವ ವಿವಿಧ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ಬಡವಿದ್ಯಾರ್ಥಿಗಳಿಗೆ ಕಳೆದ ನಾಲ್ಕು ವರ್ಷಗಳಿಂದ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಸೂಮಾರು ಹತ್ತು ಸಾವಿರ ವಿದ್ಯಾರ್ಥಿಗಳಿಗೆ 20 ಸಾವಿರ ಪಠ್ಯ ಪುಸ್ತಕ ವಿತರಣೆ ಮಾಡುತ್ತಾ ಬಂದಿದ್ದಾರೆ. ಇನ್ನೂ ಹೆಚ್ಚಿನ ಶಾಲೆಗಳಿಗೂ ಹಂಚಿಕೆ ಮಾಡುವ ಗುರಿಯನ್ನು ಹೊಂದಿದ್ದೇನೆ. ನನಗೆ ಬರುವ ತಿಂಗಳ ಹತ್ತು ಸಾವಿರ ವೇತನದಿಂದ ಸೇವೆ ಮಾಡುತ್ತಾ ಬಂದಿದ್ದೇನೆ. ಬಡವಿದ್ಯಾರ್ಥಿಗಳಿಗೆ ನೇರವಾಗಿ ಅವರ ಬಾಳಲ್ಲಿ ಬೆಳಕು ಮೂಡಿಸುವ ಕೆಲಸ ಆಗಬೇಕು ಎಂದ ಅವರು ಮಕ್ಕಳಿಗೆ ಆಸ್ತಿಯನ್ನು ಮಾಡಬೇಡಿ, ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡುವುಂತೆ ಪೋಷಕರಿಗೆ ಕಿವಿ ಮಾತು ಹೇಳಿದರು.

ನಂತರ ಶಾಲಾ ಮುಖ್ಯ ಗುರುಗಳು ಜಯಶ್ರೀ ಪಾಳೇಕರ್ ಅವರು ಮಾತನಾಡಿ ಸರಕಾರಿ ಶಾಲೆಗಳ ಮಕ್ಕಳಿಗೆ ಜಿ.ಕೆ. ನಾಗರಾಜ್ ಅವರು ಉಚಿತವಾಗಿ ಪಠ್ಯ ಪುಸ್ತಕಗಳನ್ನು ನೀಡುತ್ತಿದ್ದು ಅವರಿಗೆ ಅಭಿನಂದನೆಗಳು ತಿಳಿಸಿದ ಅವರು, ನಿಮ್ಮ ನಿಸ್ವರ್ಥ ಸೇವೆಗೆ ಸಮಾಜದ ಪ್ರತಿಯೊಬ್ಬರೂ ತನು. ಮನ. ಧನದಿಂದ ಕೈ ಜೋಡಿಸಿಬೇಕು. ನಿಮ್ಮ ನಿಸ್ವರ್ಥ ಸಾಮಾಜಿಕ ಕಾರ್ಯಕ್ರಮಗಳು ಜಿಲ್ಲೆಯಾದ್ಯಂತ ನಡೆಯಲಿ.

ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು, ಉತ್ತಮ ಅಂಕಗಳನ್ನು ಪಡೆದು ಹೆತ್ತವರು, ಅಕ್ಷರ ಕಲಿಸಿದ ಗುರುಗಳು, ಹುಟ್ಟಿದ ಊರಿಗೂ ಕೀರ್ತಿ ತರಬೇಕೆಂದು ವಿದ್ಯಾರ್ಥಿಗಳಿಗೆ ಹೇಳಿದರು.

ಈ ಸಂದರ್ಭದಲ್ಲಿ ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ. ನಾಗರಾಜ್. ಸಂಗಡಿಗರು, ಮುಖ್ಯ ಶಿಕ್ಷಕಿ ಮತ್ತು ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.

error: Content is protected !!