ಬೆಳಗಾವಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ SCP /TSP ಅನುದಾನದ ಮೊತ್ತ ದುರ್ಬಳಕೆ ಆಗಿರುವುದನ್ನು ವಿರೋಧಿಸಿ ಇಂದು ಬೆಳಗಾವಿಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಜನಾಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟ ಅಧಿಕಾರ ಹಾಗೂ ಗ್ಯಾರಂಟಿಗಳ ಹೆಸರಿನಲ್ಲಿ ಆಗುತ್ತಿರುವ ಮೋಸದ ಕುರಿತು ಮಾತನಾಡಿ, ಜನರಲ್ಲಿ ಜಾಗೃತಿ ಮೂಡಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಸಂಸದರಾದ ಜಗದೀಶ್ ಶೆಟ್ಟರ ಬೆಳಗಾವಿ ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ ಪಾಟೀಲ, ಬೆಳಗಾವಿ ಮಹಾನಗರದ ಬಿಜೆಪಿ ಅಧ್ಯಕ್ಷರಾದ ಗೀತಾ ಸುತಾರ, ಮಾಜಿ ಶಾಸಕರಾದ ಎನ್. ಮಹೇಶ, ಮಹಾಂತೇಶ ದೊಡ್ಡಗೌಡರ್, ಸಂಜಯ ಪಾಟೀಲ, ಅರವಿಂದ ಪಾಟೀಲ, ಬಿಜೆಪಿ ಪಕ್ಷದ ರಾಜ್ಯ ಮಹಿಳಾ ಉಪಾಧ್ಯಕ್ಷರಾದ ಡಾ. ಪ್ರಫುಲ್ಲಾ ಮಲ್ಲಾಡಿ, ವಿಧಾನಪರಿಷತ್ತಿನ ಮಾಜಿ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಪ್ರಮುಖರಾದ ಅನಿಲ್ ಕುಮಾರ್, ಡಾ. ರವಿ ಪಾಟೀಲ, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ವರದಿ : ಸದಾನಂದ ಎಚ್