ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ದಾಖಲೆಯ 16 ನೇ ಬಜೆಟ್ ಮಂಡಿಸಿದ್ದು ಇದು ಜನಪರವಾದ ಬಜೆಟ್ ಆಗಿದೆ ಬಡವರ ಹಾಗೂ ಶ್ರಮಿಕರ ಪರವಾಗಿದ್ದು ಸರ್ವತೋಮುಖ ಅಭಿವೃದ್ಧಿಗೆ ಹೊತ್ತನ್ನು ನೀಡಲಾಗಿದೆ ಬಸವಣ್ಣನವರ ತತ್ವ ಆದರ್ಶ ಗಳೊಂದಿಗೆ ಮಹಾತ್ಮ ಗಾಂಧಿಯವರ ಕಂಡಂತಹ ಕನಸು ನಮ್ಮ ಸರ್ಕಾರ ಈಡೇರಿಸುತ್ತಿದೆ.
ಮುಖ್ಯಮಂತ್ರಿಯವರು ಐತಿಹಾಸಿಕ ದಾಖಲೆಯ ಬಜೆಟ್ ಮಂಡಿಸಿದ್ದು ಅವರಿಗೆ ಭಗವಂತ ಉತ್ತಮ ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದರು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಲ್ಲಿನ ಆಯುವ್ಯಯದ ಮಾಹಿತಿ 👇
ರಾಜ್ಯದ ಬಡವರ ಹಸಿವು ನೀಗಿಸುವ ಉದ್ದೇಶದಿಂದ ಆರಂಭಿಸಲಾದ ಅನ್ನಭಾಗ್ಯ ಯೋಜನೆಯಡಿ ಇದುವರೆಗೂ ಹೆಚ್ವುವರಿ 5ಕೆಜಿ ಆಹಾರ ಧಾನ್ಯಕ್ಕೆ ಪರ್ಯಾಯವಾಗಿ ನೀಡಲಾಗುತ್ತಿರುವ ಸಹಾಯಧನದ ಬದಲಾಗಿ 5ಕೆಜಿ ಅಕ್ಕಿಯನ್ನು ವಿತರಿಸಲಾಗುವುದು ಇದರಿಧ 4.21ಕೋಟಿ ಫಲಾನುಭವಿಗೆ ಹೆಚ್ಚುವರಿ ಅಕ್ಕಿ ಲಭ್ಯವಾಗಲಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಯ ನ್ನು ಇನ್ನಷ್ಟು ಸುಧಾರಿಸಲು ತಂತ್ರಜ್ಞಾನ ವನ್ನು ಗರಿಷ್ಠ ಬಳಕೆ ಮಾಡಲಾಗುವುದು.
ಇದಕ್ಕಾಗಿ ಒಟ್ಟಾರೆ 5 ಕೋಟಿ ರೂ ವೆಚ್ಚದಲ್ಲಿ ಸಗಟು ಗೋಧಾಮುಗಳಿಗೆ CCTV ಅಳವಡಿಕೆ GPS ಆಧಾರಿತ ವಾಹನTracking ವ್ಯವಸ್ಥೆ ಮತ್ತು Command control centre ಸ್ಥಾಪಿಸಲಾಗುವುದು.
80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸಲು ಹಿಂದಿನ ವರ್ಷ ಅನ್ನ-ಸುವಿಧಾ ಯೋಜನೆ ಜಾರಿಗೊಳಿಸಲಾಗಿದೆ.
ಈ ಯೋಜನೆಯಡಿ 2ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು75 ವಯಸ್ಸಿನ ಮೇಲ್ಪಟ್ಟ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೂ ಈ ಸೇವೆ ವಿಸ್ತರುಸಲಾಗುವುದು
ಇದರಿಂದ 3.30 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಯ ನ್ನು ಸಮರ್ಪಕವಾಗಿ ನಿಗಾವಹಿಸಲು ಸಾದ್ಯವಾಗುವಂತೆ ನ್ಯಾಯಬೆಲೆ ಅಂಗಡಿಗಳಲ್ಲಿ
Electronic weighing Machine ಮತ್ತು Point of sale system ಗಳನ್ನು ಸಾರ್ವಜನಿಕ ವಿತರಣಾ ಪದ್ದತಿಯ IT ವ್ಯವಸ್ಥಯೊಂದಿಗೆ ಸಂಯೋಜಿಸಲಾಗುವುದು.
ಅನ್ನಭಾಗ್ಯ ಯೋಜನೆಯ ಸಗುಟು ಲಾಭಾಂಶ ಪ್ರತಿ ಕ್ವಿಂಟಾಲ್ 35 ರೂಗಳಿಂದ 45 ರೂಗಳಿಗೆಹೆಚ್ಚಳ ಮಾಡಲಾಗಿದೆ.