ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ (ಮಾರ್ಚ್ 14) ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷರೂ ಆಗಿರುವ ಶಾಸಕ ರುದ್ರಪ್ಪ ಲಮಾಣಿ ಗಾಯಗೊಂಡಿದ್ದಾರೆ.
ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸದ್ಯ ಅವರನ್ನು ದಾವಣಗೆರೆಯ ಎಸ್‌ಎಸ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.