ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ – 2025 ಹಾಗೂ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರುಕಟ್ಟೆ ಮೇಳ ಕಾರ್ಯಕ್ರಮಕ್ಕೆ ಬೀದರ ಲೋಕಸಭಾ ಕ್ಷೇತ್ರದ ಸಂಸದರಾದ ಸಾಗರ ಖಂಡ್ರೆ ಚಾಲನೆ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್, ಹಾಗೂ ಜಿಲ್ಲಾ ಪಂಚಾಯತ್, ಬೀದರ ಇವರ ಸಹಯೋಗದಲ್ಲಿ ಆಯೋಜಿಸಲಾದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ – 2025 ಹಾಗೂ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರುಕಟ್ಟೆ ಮೇಳ ಕಾರ್ಯಕ್ರಮಕ್ಕೆ ಬೀದರ ಲೋಕಸಭಾ ಕ್ಷೇತ್ರದ ಸಂಸದರಾದ ಸಾಗರ ಖಂಡ್ರೆ ಅವರು ಚಾಲನೆ ನೀಡಿ ಮಾತನಾಡಿದರು.

ಮಹಿಳೆಯರ ಸಬಲೀಕರಣವೆಂದರೆ ಕೇವಲ ಮಾತುಗಳ ಮಟ್ಟದಲ್ಲಿ ಸೀಮಿತವಾಗಿರಬಾರದು. ಆರ್ಥಿಕ ಸ್ವಾವಲಂಬನೆ, ಉದ್ಯೋಗಾವಕಾಶ, ಉದ್ಯಮಶೀಲತೆ ಮತ್ತು ಶಿಕ್ಷಣವೇ ನಿಜವಾದ ಸಬಲೀಕರಣಕ್ಕೆ ದಾರಿ ಮಾಡಿಕೊಡುತ್ತದೆ. ಇಂತಹ ವಸ್ತುಪ್ರದರ್ಶನಗಳು ಮತ್ತು ಮಾರುಕಟ್ಟೆ ಮೇಳಗಳು ಗ್ರಾಮೀಣ ಮಹಿಳೆಯರಿಗೆ ತಮ್ಮ ಉತ್ಪನ್ನಗಳನ್ನು ಪ್ರಚಾರ ಮತ್ತು ಮಾರಾಟ ಮಾಡಲು ಉತ್ತಮ ವೇದಿಕೆಯಾಗುತ್ತದೆ. ಮಹಿಳೆಯರು ಸ್ವ-ಸಹಾಯ ಗುಂಪುಗಳ ಮೂಲಕ ಆರ್ಥಿಕವಾಗಿ ಸ್ವಾವಲಂಬಿಯಾಗಿ ಬೆಳೆದು ನಮ್ಮ ಸಮಾಜದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಈ ಪ್ರಯತ್ನದಲ್ಲಿ ನನ್ನ ಸಂಪೂರ್ಣ ಬೆಂಬಲ ಮತ್ತು ಸಹಕಾರವಿರುತ್ತದೆ ಎಂದು ತಿಳಿಸಿದರು.

error: Content is protected !!