ನಾರಾಯಣಪುರ ಎಡದಂಡೆ ಕಾಲುವೆಯ ವ್ಯಾಪ್ತಿಯಲ್ಲಿಯ ರೈತರ ಬೆಳೆಗಳು ಒಣಗುವ ಸ್ಥಿತಿಯಲ್ಲಿದ್ದು ಇನ್ನು ಕೆಲವು ದಿನಗಳ ಕಾಲ ಕಾಲುವೆಗೆ ನೀರು ಹರಿಸದೆ ಹೋದರೆ ಬೆಳೆಗಳು ಸಂಪೂರ್ಣವಾಗಿ ಹಾಳಾಗಿ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ.
ಹಿಗಾಗಿ ರೈತರ ಹಿತ ಕಾಪಾಡುವ ದೃಷ್ಟಿಯಿಂದ ಮಹರಾಷ್ಮಾ ರಾಜ್ಯದ ಕೋಯ್ತಾ ಜಲಾಶಯದಿಂದ ನಾರಾಯಣಪುರ ಜಲಾಶಯಕ್ಕೆ ನೀರು ಹರಿಸಿಕೊಂಡು, ನಾರಾಯಣಪುರ ಎಡದಂಡೆ ಕಾಲುವೆಯ ಜಾಲಗಳಿಗೆ ದಿನಾಂಕ:10.04.2025ರ ವರೆಗೆ ನಿರಂತರವಾಗಿ ನೀರು ಹರಿಸಲು ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಹುಣಸಗಿ ಶಾಸಕ ವೇಣುಗೋಪಾಲ್ ನಾಯಕ ಸಿಎಂ ಸಿದ್ದರಾಮಯ್ಯ ನವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ವರದಿ : ರಸೂಲ್ ಬೆನ್ನೂರ್