ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಲ್ಬುರ್ಗಿ
ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ,
ಶಿಶು ಅಭಿವೃದ್ಧಿ ಯೋಜನೆ ಭಾಲ್ಕಿ ಹಾಗೂ ಕಲಿಕೆ ಟಾಟಾ ಟ್ರಸ್ಟ್ ಬೆಂಗಳೂರು ಇವರ ಸಹಯೋಗದಲ್ಲಿ ಭಾಲ್ಕಿ ತಾಲೂಕಿನ ಮೊರಂಬಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಉಚ್ಛಾ ಗ್ರಾಮದಲ್ಲಿ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಕಾರ್ಯಕ್ರಮದಡಿ ಬಾಲ ಮೇಳ ಕಾರ್ಯಕ್ರಮವನ್ನು ಮೊರಂಬಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಕಸ್ತೂರಬಾಯಿ ದತ್ತಾತ್ರಿ ಕರಾಡೆ ಉದ್ಘಾಟಿಸಿದರು.. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಲ್ಕಿ ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಾದ ಶ್ರೀನಿವಾಸ್ ಬಾಳವಾಲೆ ಮಾತನಾಡಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಕಲಿಕಾ ಮಟ್ಟವನ್ನು ಹೆಚ್ಚಿಸಲು ಮತ್ತು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಈ ಕಾರ್ಯಕ್ರಮ ಬಹಳ ಅವಶ್ಯಕತೆಯಾಗಿದೆ ಎಂದು ಹೇಳಿದರು. ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶಾಲಾ ಪೂರ್ವ ಶಿಕ್ಷಣ ಸಹಕಾರಿಯಾಗಿದೆ .. ಮಕ್ಕಳ ಕಲಿಕೆಗೆ ಶಾಲಾ ಪೂರ್ವ ಶಿಕ್ಷಣ ಸಹಕಾರಿಯಾಗಿದೆ ಚಟುವಟಿಕೆ ಮೂಲಕ ಶಿಕ್ಷಣ ನೀಡುವುದರಿಂದ ಮಕ್ಕಳ ಕಲಿಕೆ ಸುಲಭವಾಗುತ್ತದೆ ಎಂದರು.. ಪೋಷಕರು ಮನೆಯಲ್ಲಿ ಮಕ್ಕಳಿಗೆ ಮೊಬೈಲ್ ಕೊಡುವ ಬದಲಿಗೆ ಸಣ್ಣ ಸಣ್ಣ ಚಟುವಟಿಕೆಗಳನ್ನು ಮಾಡಿಸುವ ಮೂಲಕ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಬೇಕು ಎಂದು ಪಾಲಕರಿಗೆ ಹೇಳಿದರು….
“ಬಾಲಮೇಳ” ಕಾರ್ಯಕ್ರಮದಲ್ಲಿ ಅಂಗನವಾಡಿ ಮಕ್ಕಳು ಅಂಗನವಾಡಿಯಲ್ಲಿ ನಡೆಯುವ ಶಾಲಾಪೂರ್ವ ಶಿಕ್ಷಣದ ಚಟುವಟಿಕೆಗಳಾದ ಅಂಗನವಾಡಿಯ ನಿಯಮಗಳು, ಆಕಾರಗಳ ಪರಿಚಯ, ಬಣ್ಣಗಳ ಪರಿಚಯ, ಇಂದಿನ ಕ್ಯಾಲೆಂಡರ್ ಚಟುವಟಿಕೆಗಳ ಪ್ರದರ್ಶನವನ್ನು ವೀಕ್ಷಿಸಿದರು.
ಮೊರಂಬಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ 10 ಅಂಗನವಾಡಿಗಳ 3 ರಿಂದ 6 ವರ್ಷದ 98 ಮಕ್ಕಳು ಹಾಗೂ ಮಕ್ಕಳ ತಾಯಂದಿರು ಸಾರ್ವಜನಿಕರು ಭಾಗವಹಿಸಿದರು ಅಂಗನವಾಡಿ ಕೇಂದ್ರದಲ್ಲಿ ಶಾಲಾ ಪೂರ್ವ ಶಿಕ್ಷಣದಲ್ಲಿ ಕಲಿತಿರುವ ವಿಷಯವನ್ನು ಮಕ್ಕಳು ತಮ್ಮ ಬಾಲಮೇಳ ಸಾಮರ್ಥ್ಯವನ್ನು ಕಾರ್ಯಕ್ರಮದ ವೇದಿಕೆಯ ಮೇಲೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮಕ್ಕಳು ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಸುಮಾರು 150ಕ್ಕೂ ಹೆಚ್ಚು ಪಾಲಕರು ಭಾಗವಹಿಸಿದ್ದರು.
ಮೊರಂಬಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ 10 ಅಂಗನವಾಡಿಗಳಲ್ಲಿ ಉಚ್ಚಾ ಗ್ರಾಮದ ಬಿ ಅಂಗನವಾಡಿ ಕೇಂದ್ರವನ್ನು ಮಾದರಿ ಅಂಗನವಾಡಿ ಕೇಂದ್ರವನ್ನಾಗಿ ಘೋಷಿಸಲಾಗಿದೆ ….
ಈ ಸಂದರ್ಭದಲ್ಲಿ ವರವಟ್ಟಿ (ಬಿ) ವಲಯ ಮೇಲ್ವಿಚಾರಕಿ ವಿದ್ಯಾವತಿ ,ಉಚ್ಚಾ ಗ್ರಾಮದ ಮಾದರಿ ಅಂಗನವಾಡಿ ಬಿ ಕೇಂದ್ರದ ಶಿಕ್ಷಕಿ ಮಹೇಶ್ವರಿ ಮಹಾಗಾವೆ, ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಮೀನಾಕ್ಷಿ ಧರ್ಮಣ್ಣಾ ,ಗ್ರಾಮ ಪಂಚಾಯತ್ ಸದಸ್ಯರಾದ ಸಿದ್ರಾಮ ಅಳ್ಳೆ, ಸಾಮಾಜಿಕ ಕಾರ್ಯಕರ್ತ ಮಹೇಶ್ ಸಜ್ಜನ, ಹಾಗೂ ಮೊರಂಬಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ 10 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.