ಅಂಬೇಡ್ಕರ್ ಜಯಂತಿ, ಶಾಸಕ ಬನ್ಸೋಡೆಗೆ ಆಹ್ವಾನ

ಔರಾದ್ : ಇದೇ ಏಪ್ರಿಲ್ 22 ರಂದು ಪಟ್ಟಣದಲ್ಲಿ ನಡೆಯಲಿರುವ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್‌ ಅವರ ಜಯಂತಿ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ ಉದಗೀರ್ ಶಾಸಕ ಸಂಜಯ್ ಬನ್ಸೋಡೆ ಅವರನ್ನು ಆಹ್ವಾನಿಸಲಾಗಿದೆ. ಈಚೇಗೆ ಡಾ. ಬಿಆರ್ ಅಂಬೇಡ್ಕರ್ ಜಯಂತಿ ಆಚರಣೆ ಸಮಿತಿಯ ಪದಾಧಿಕಾರಿಗಳು ಶಾಸಕ ಸಂಜಯ್ ಬನ್ಸೋಡೆ ಅವರನ್ನು ಆತ್ಮೀಯವಾಗಿ ಸತ್ಕರಿಸಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕ ಬನ್ಸೋಡೆ, ಡಾ.ಬಿಆರ್ ಅಂಬೇಡ್ಕರ್ ಅವರ ಜಯಂತಿ ಗಡಿ ತಾಲೂಕು ಔರಾದ್ ನಲ್ಲಿ ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆರಚಣೆ ಮಾಡುತ್ತಿರುವುದು ಸಂತಸದ ವಿಷಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮಕ್ಕೆ ಖಂಡಿತವಾಗಿ ಆಗಮಿಸುತ್ತೇನೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧವಾಗಿದ್ದು, ಸಾಂಸ್ಕತಿಕ ಕಾರ್ಯಕ್ರಮಗಳು, ಅಂಬೇಡ್ಕರ್ ಅವರ ಕುರಿತು ವಿಶೇಷ ಉಪನ್ಯಾಸ ಸೇರಿದಂತೆ ಸಮಾಜಮುಖಿ ಚಟುವಟಿಕೆಗಳು ಮಾಡಲಾಗುತ್ತಿದೆ. ಆದ್ದರಿಂದ ತಾಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಈಗಾಗಲೇ ಪ್ರಚಾರ ಆರಂಭಿಸಲಾಗಿದೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಶಿವಕುಮಾರ ಕಾಂಬಳೆ ತಿಳಿಸಿದರು.

ಪ್ರಮುಖರಾದ ಸ್ವಾಗತ ಸಮಿತಿ ಅಧ್ಯಕ್ಷ ಸುನಿಲಕುಮಾರ ದೇಶಮುಖ, ಸೋಪಾನರಾವ ಡೋಂಗರೆ, ಧನಾಜಿ ಕಾಂಬಳೆ, ರವಿ ಎರನಾಳೆ ಸೇರಿದಂತೆ ಅನೇಕರಿದ್ದರು.

ವರದಿ : ರಾಚಯ್ಯ ಸ್ವಾಮಿ

error: Content is protected !!