ಔರಾದ್ : ಬಸವ ಜಯಂತಿ ಅಂಗವಾಗಿ ಏ.29ರಂದು ಮಂಗಳವಾರ ಪಟ್ಟಣದ ಅನುಭವ ಮಂಟಪದಲ್ಲಿ ವಚನ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದು ತಹಸೀಲ್ದಾರ ಮಹೇಶ ಪಾಟೀಲ್ ತಿಳಿಸಿದ್ದಾರೆ. ತಾಲೂಕು ಆಡಳಿತದಿಂದ ಏ. 30 ರಂದು ನಡೆಯಲಿರುವ ಬಸವ ಜಯಂತಿ ನಿಮಿತ್ತ ಪೂರ್ವಭಾವಿ ಸಭೆಯಲ್ಲಿ ಕೈಗೊಂಡಿರುವ ನಿರ್ಣಯದಂತೆ ಸ್ಪರ್ಧೆಗಳು ಆಯೋಜಿಸಲಾಗಿದ್ದು, ಯುವಕರು, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅವಕಾಶವಿದ್ದು, ವಿಜೇತ ಸ್ಪರ್ಧಿಗಳಿಗೆ ಪ್ರಮಾಣ ಪತ್ರದೊಂದಿಗೆ ಜಯಂತಿ ದಿನದಂದು ತಾಲೂಕು ಆಡಳಿತದಿಂದ ಸತ್ಕರಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೊ.ಸಂ. 98 80 277185, 9901692456 ಅನ್ನು ಸಂಪರ್ಕಿಸಬಹುದು ಎಂದು ತಹಸೀಲ್ದಾರ ಪಾಟೀಲ್ ತಿಳಿಸಿದ್ದಾರೆ.
ವರದಿ : ರಾಚಯ್ಯ ಸ್ವಾಮಿ