ಜೇವರ್ಗಿ : ಮೈಕ್ರೋ ಫೈನೆನ್ಸ್ ಕಂಪನಿಯ ಸಿಬ್ಬಂದಿಯ ಕಿರುಕುಳದಿಂದ ಬೇಸತ್ತು ಜೇವರ್ಗಿ ತಾಲೂಕಿನ ಯಾತನೂರ ಗ್ರಾಮದಲ್ಲಿ ಶನಿವಾರ ವ್ಯಕ್ತಿಯೊಬ್ಬ ಮನೆಯಲ್ಲಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ
ನಾಗೇಶ್ ರಾಮಣ್ಣ ರೂಗಿ(50)ಆತ್ಮಹತ್ಯೆ ಮಾಡಿಕೊಂಡಿರುವವರು ಕಲಬುರಗಿ ಹಿಂದೂಜಾ ಹಣಕಾಸು ಸಂಸ್ಥೆಯಲ್ಲಿ ಒಟ್ಟು 5ಲಕ್ಷ ಸಾಲ ಪಡೆದುಕೊಂಡಿದ್ದರು ಅದರಲ್ಲಿ 3.5 ಲಕ್ಷ ಮರುಪಾವತಿ ಮಾಡಿದ್ದರು ಉಳಿದ 1.5ಲಕ್ಷ ಸಾಲದ ಹಣ ಕಟ್ಟುವಂತೆ ಹಿಂದೂಜಾ ಹಣಕಾಸು ಸಂಸ್ಥೆಯ ಸಿಬ್ಬಂದಿ ಯಾತನೂರ ಗ್ರಾಮದ ಮನೆಗೆ ಬಂದು ಕಿರುಕುಳ ನೀಡುತಿದ್ದರು ಅವರ ಮನೆಯ ಗೋಡೆಯ ಮೇಲೆ ಬರೆದಿದ್ದರು ಫೈನೆನ್ಸ್ ಸಿಬ್ಬಂದಿ ಕಿರುಕುಳ ನೀಡಿದ ಕಾರಣಕ್ಕೆ ಮನೆಯಲ್ಲಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಾಗೇಶ್ ಪತ್ನಿ ಸುನಂದ ರೂಗಿ ಅವರು ನೇಲೋಗಿ ಪೊಲೀಸ್ ಠಾಣೆಗೆ ದೂರು ನೀಡಿದರು ಸ್ಥಳಕ್ಕೆ ಆಗಮಿಸಿದ ನೇಲೋಗಿ ಪೊಲೀಸ್ ಠಾಣೆಯ ಪಿಎಸ್ಐ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಬ್ಯಾಂಕ್ ಸಿಬ್ಬಂದಿಯನ್ನು ವಶಕ್ಕೆ ಪಡೆದುಕೊಂಡರು.
ವರದಿ : ವಿರೇಶ್ ಮಠ