ಔರಾದ ಬಸವ ಜಯಂತಿ ಬೈಕ್ ರ್‍ಯಾಲಿ ಇಂದು

ಔರಾದ್ : ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತ್ಯುತ್ಸವನ್ನು ಏ.29 ಹಾಗೂ 30ರಂದು ಎರಡು ದಿನಗಳ ಕಾಲ ಅತ್ಯಂತ ವಿಜೃಂಭಣೆ ಹಾಗೂ ವಿಶಿಷ್ಠ ರೀತಿಯಲ್ಲಿ ಆಚರಿಸಲು ತಿರ್ಮಾನಿಸಲಾಗಿದೆ.

ಜಯಂತಿ ಅಂಗವಾಗಿ ಮಂಗಳವಾರ ಬೈಕ್ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಅನುಭವ ಮಂಟಪದ ಎದುರು ಸಾಯಂಕಾಲ 5 ಗಂಟೆಗೆ ಬೈಕ್ ರ್‍ಯಾಲಿಗೆ ತಹಸೀಲ್ದಾರ ಮಹೇಶ ಪಾಟೀಲ್, ಸಿಪಿಐ ರಘುವೀರಸಿಂಗ್ ಠಾಕೂರ್, ತಾಪಂ‌ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಅವರು ಬಸವಣ್ಣನವರ ವಚನ ಹೇಳುವ ಮೂಲಕ ಜಂಟಿಯಾಗಿ ಚಾಲನೆ ನೀಡಲಿದ್ದಾರೆ. ಪಟ್ಟಣದ ನಾನಾ ಬಡಾವಣೆ ಸೇರಿದಂತೆ ಮುಖ್ಯರಸ್ತೆಯಲ್ಲಿ ಬೈಕ್ ರ್‍ಯಾಲಿ ನಡೆಸುವ ಮೂಲಕ ಕನ್ನಡಾಂಬೆ ವೃತ್ತದಲ್ಲಿ ಸಮಾರೋಪಗೊಳ್ಳಲಿದೆ.

ಸಮಾಜದ ಮುಖಂಡರು, ಬಸವಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಮಿತಿಯ ಗೌರವಾಧ್ಯಕ್ಷ ಕಲ್ಲಪ್ಪ ದೇಶಮುಖ ಸೇರಿದಂತೆ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!