ಬೆಲೆ ಏರಿಕೆ ಖಂಡಿಸಿ ಬೆಳಗಾವಿಯಲ್ಲಿ ಬ್ರಹತ್ ಪ್ರತಿಭಟನೆ

ಬೆಳಗಾವಿ : ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ‘ಸಂವಿಧಾನ ರಕ್ಷಿಸಿ’ ಹಾಗೂ ‘ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ’ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಶ್ರೀ ರಣದೀಪ್ ಸಿಂಗ್ ಸುರಜೇವಾಲಾ ಹಾಗೂ ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು
ಇದೇ ಸಂದರ್ಭದಲ್ಲಿ ಪಹಲ್ಗಾಮ್ ದಾಳಿಯಲ್ಲಿ ಹುತಾತ್ಮರಾದ ಕನ್ನಡಿಗರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಶ್ರದ್ಧಾಂಜಲಿಯನ್ನು ಸಲ್ಲಿಸಿದರು,
ಈ ಸಮಾವೇಶದಲ್ಲಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್, ಆರ್.ಬಿ.ತಿಮ್ಮಾಪುರ್, ಕೆ.ಎಚ್.ಮುನಿಯಪ್ಪ, ಶ್ರೀಮತಿ ಲಕ್ಷ್ಮೀ ಹೇಬಾಳ್ಕರ್ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿ ಸೇರಿದಂತೆ ವೇದಿಕೆಯಲ್ಲಿ ರಾಜ್ಯಸಭೆಯ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಜಿಲ್ಲೆಯ ಶಾಸಕರು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ವರದಿ : ಸದಾನಂದ ಎಂ

error: Content is protected !!