ಹೊನಗನಹಳ್ಳಿ ರೇಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ ಜಿಗಜಿಣಗಿ

ವಿಜಯಪುರ: ನಗರ ಹೊರ ಭಾಗದ ಹೊನಗನಹಳ್ಳಿ ಬಳಿಯ ವಿಜಯಪುರ- ಬಾಗಲಕೋಟೆ ರಾಷ್ಟ್ರೀಯ ಹೆದ್ದಾರಿಯ ರೇಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಸಂಸದ ರಮೇಶ ಜಿಗಜಿಣಗಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ರಸ್ತೆಯಲ್ಲಿ ರೇಲ್ವೆ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಬಹುದಿನಗಳಿಂದ ಸಾರ್ವಜನಿಕರ ಒತ್ತಾಯವಿತ್ತು. ಇದಕ್ಕೆ ಸ್ಪಂದಿಸಿದ ಸಂಸದ ರಮೇಶ ಜಿಗಜಿಣಗಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತನ್ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಮಾಡಿಕೊಂಡ ಹಿನ್ನೆಲೆ, ಕೇಂದ್ರ ಸರ್ಕಾರದ 70 ಕೋಟಿ ರೂ. ಅನುದಾನದ ವೆಚ್ಚದಲ್ಲಿ ನಡೆದ, ಒಂದೂವರೆ ಕಿಮೀನ ರೇಲ್ವೆ ಮೇಲ್ಸೇತುವೆ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಅತೀ ಶೀಘ್ರದಲ್ಲಿ ಲೋಕಾಪರ್ಣೆಗೊಂಡು, ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಹೇಳಿದರು.

ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿಯ ಕಾರ್ಯಪಾಲಕ ಅಭಿಯಂತರ ವಿಜಯ ಪಾಟೀಲ, ಸಹಾಯಕ ಕಾರ್ಯಪಾಲಕ ಅಭಿಯಂತರ ವಿವೇಕ ಮಠ, ಬಿಜೆಪಿ ಮಾಧ್ಯಮ ಪ್ರಮುಖ ವಿಜಯ ಜೋಶಿ ಇದ್ದರು.

ವರದಿ : ಅಜೀಜ ಪಠಾಣ.

error: Content is protected !!