ವಿಜಯಪುರ ಜಿಲ್ಲಾಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಗೆ ಎಂ.ಬಿ ಪಾಟೀಲ್ ಚಾಲನೆ

ವಿಜಯಪುರ : ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟಿನ್‍ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ರವಿವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ, ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ಅಜೀಜ ಪಠಾಣ.

error: Content is protected !!