ಒಟ್ಟು ಮೌಲ್ಯ ₹25 ಲಕ್ಷ ಮೌಲ್ಯದ ಆಭರಣ ನಗದು ಜಪ್ತಿ ಮಾಡಿದ ಚೆನ್ನಮ್ಮನಕೆರೆ ಪೊಲೀಸರು
ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ಸರಹದ್ದಿನ ಕತ್ರಿಗುಪ್ಪೆ, ಬನಶಂಕರಿ 3ನೇ ಹಂತದಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:23/05/2025 ರಂದು ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರ್ಯಾದುದಾರರು ಹಾಗೂ ಪಿರ್ಯಾದುದಾರರ ಪತ್ನಿಯವರು ದಿನಾಂಕ:21/05/2025 ರಂದು ಚಿಕ್ಕಮಗಳೂರಿಗೆ ಹೋಗಿರುತ್ತಾರೆ. ದಿನಾಂಕ:22/05/2025 ತಡರಾತ್ರಿ ಪಿದ್ಯಾದಿಯವರು ವಾಪಸ್ ಮನೆಗೆ ಬಂದು ನೋಡಲಾಗಿ, ಕೊಠಡಿಯ ಬೀರುವಿನಲ್ಲಿದ್ದ ₹ 24,00,000/- ಲಕ್ಷ ನಗದು, 175 ಗ್ರಾಂ ಚಿನ್ನಾಭರಣ ಮತ್ತು | ಕೆ.ಜಿ 500 ಗ್ರಾಂ ಬೆಳ್ಳಿಯ ನಾಣ್ಯಗಳು ಕಳುವಾಗಿರುವುದಾಗಿ ತಿಳಿಸಿರುತ್ತಾರೆ. ಈ ಕುರಿತು ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು. ಬಾತ್ಮೀದಾರರಿಂದ ಮಾಹಿತಿಯನ್ನು ಕಲೆಹಾಕಿ, ದಿನಾಂಕ:28/05/2025 ರಂದು ಠಾಣಾ ಸರಹದ್ದಿನಲ್ಲಿರುವ ರಿಂಗ್ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ಪ್ರಶ್ನಿಸಲಾಗಿ, ಈ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ತನ್ನೊಪ್ಪಿಕೊಂಡಿದ್ದು ಮತ್ತು ಅವರ ಮತ್ತಿಬ್ಬರ ಸಹಚರರ ಬಗ್ಗೆ ಮಾಹಿತಿಯನ್ನು ನೀಡಿರುತ್ತಾರೆ.
ದಿನಾಂಕ:29/05/2025 ರಂದು ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 7 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆಯಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಗಳಿಬ್ಬರ ಮಾಹಿತಿಯ ಮೇರೆಗೆ ದಿನಾಂಕ:02/06/2025 ರಂದು 175 ಗ್ರಾಂ ಚಿನ್ನಾಭರಣ, 1 ಕೆ.ಜಿ 500 ಗ್ರಾಂ ಬೆಳ್ಳಿಯ ನಾಣ್ಯಗಳು ಹಾಗೂ ₹ 4,00.000/- ನಗದನ್ನು, ಕೃತ್ಯಕ್ಕೆ ಉಪಯೋಗಿಸಿದ ಎರಡು ರಾಡ್ ಹಾಗೂ ದ್ವಿ-ಚಕ್ರ ವಾಹನವನ್ನು ಸಹ ವಶಪಡಿಸಿಕೊಳ್ಳಲಾಯಿತು.
ದಿನಾಂಕ:04/06/2025 ರಂದು ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ತನಿಖೆಯನ್ನು ಮುಂದುವರೆಸಿ, ಆರೋಪಿಗಳ ಸಹಚರರಿಬ್ಬರ ಪೈಕಿ ಓರ್ವ ಆರೋಪಿಯನ್ನು ಜಯನಗರ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಭಾಗಿಯಾಗಿ, ಕೇಂದ್ರ ಕಾರಾಗೃಹದಲ್ಲಿರುವ ಬಗ್ಗೆ ಮಾಹಿತಿಯನ್ನು ಪಡೆದು. ಆತನನ್ನು ದಿನಾಂಕ:09/06/2025 ರಂದು 5 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆಯಲಾಯಿತು.
ದಿನಾಂಕ:12/06/2025 ರಂದು ಆರೋಪಿಯಿಂದ ಕಳವು ಮಾಡಿದ್ದ ಹಣದ ಪೈಕಿ ₹ 5,00,000/- ನಗದನ್ನು ವಶಪಡಿಸಿಕೊಳ್ಳಲಾಯಿತು. ಈ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಮತ್ತೋರ್ವ ಆರೋಪಿಯ ಪತ್ತೆಕಾರ್ಯ ಮುಂದುವರೆದಿದೆ. ತನಿಖೆ ಪ್ರಗತಿಯಲ್ಲಿದೆ.
ಈ ಪ್ರಕರಣದ ಮೂವರು ಆರೋಪಿಗಳಿಂದ ಒಟ್ಟು 175 ಗ್ರಾಂ ಚಿನ್ನಾಭರಣ, 1 ಕೆ.ಜಿ 500ಗ್ರಾಂ ಬೆಳ್ಳಿಯ ನಾಣ್ಯಗಳು ಹಾಗೂ ₹9.00,000/- ನಗದು. ಕೃತ್ಯಕ್ಕೆ ಉಪಯೋಗಿಸಿದ ಎರಡು ರಾಡ್ ಹಾಗೂ ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಒಟ್ಟು ಮೌಲ್ಯ ₹ 25,00,000/-(ಇಪ್ಪತ್ತೈದು ಲಕ್ಷ ರೂಪಾಯಿ).
ಈ ಪ್ರಕರಣದ ಮೂವರು ಆರೋಪಿಗಳಿಂದ 1) ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯ-01 ಕನ್ನ ಕಳವು ಪ್ರಕರಣ, 2) ಹನುಮಂತನಗರ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ ಒಟ್ಟು ಎರಡು
ಪ್ರಕರಣಗಳು ಪತ್ತೆಯಾಗಿರುತ್ತವೆ.
ದಿನಾಂಕ:13/06/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯದ ಆದೇಶದ ಮೇರೆಗೆ ಕೇಂದ್ರ
ಕಾರಾಗೃಹಕ್ಕೆ ಬೀಡಲಾಗಿರುತ್ತದೆ.
ಈ ಕಾರ್ಯಾಚರಣೆಯನ್ನು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಲೋಕೇಶ್ ಭ ಜಗಲಾಸರ್ ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ, ವಿ.ವಿ.ಪುರಂ ಉಪ-ವಿಭಾಗದ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಶಾಮೀದ್ ಬಾಷಾ ರವರ ನೇತೃತ್ವದಲ್ಲಿ, ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ. ಸಿ.ಗಿರೀಶ್ ನಾಯ್ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ವರದಿ : ಮುಬಾರಕ್ ಬೆಂಗಳೂರು