ಬೆಂಗಳೂರು : ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಬಾತ್ಮೀಧಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ.
ಮಾಹಿತಿಯಲ್ಲಿ ಬೆಂಗಳೂರು ನಗರದ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೆ.ದೊಮ್ಮ ಸಂದ್ರ ಗ್ರಾಮದ ಮನೆ ಯೊಂದರಲ್ಲಿ ವಾಸವಿರುವ ವಿದೇಶಿ ಪ್ರಜೆಯೊರ್ವನು ನಿಷೇಧಿತ ಮಾದಕ ವಸ್ತುವಾದ ಬಿಳಿ ಬಣ್ಣದ ಎಂ.ಡಿ.ಎಂ.ಎ ಕ್ರಿಸ್ಟಲ್ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ.
ಈ ಮಾಹಿತಿ ಆಧಾರದ ಮೇರೆಗೆ ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರು ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿ, ನಂತರ ಸಿಸಿಬಿ ಯ ಅಧಿಕಾರಿಗಳು ಮತ್ತು ಅವಲಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಜಂಟಿಯಾಗಿ ಬಾತ್ಮೀಧಾರರು ತಿಳಿಸಿದ ಸ್ಥಳಕ್ಕೆ ಧಾವಿಸಿ, ದಾಳಿ ನಡೆಸಿ, ಓರ್ವ ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆದಿದ್ದಾರೆ.
ಆತನ ವಶದಲ್ಲಿದ್ದ 600ಗ್ರಾಂ ನಿಷೇದಿತ ಮಾಧಕ ವಸ್ತುವಾದ ಬಿಳಿ ಬಣ್ಣದ ಎಂ.ಡಿ.ಎಂ.ಎ ಕ್ರಿಸ್ಟಲ್‌ಗಳನ್ನು ಮತ್ತು ಇತರೆ ವಸ್ತುಗಳನ್ನು ವಶಪಡಿಸಿ ಕೊಂಡಿದ್ದು ಇವುಗಳ ಒಟ್ಟು ಮೌಲ್ಯ ₹1.20.00.000/-(ಒಂದು ಕೋಟಿ ಇಪ್ಪತ್ತು ಲಕ್ಷ ರೂಪಾಯಿ)ಯಾಗಿರುತ್ತದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, 3 ದಿನಗಳ ಕಾಲ ಪೊಲೀಸ್ ಆಭಿರಕ್ಷೆಗೆ ಪಡೆಯಲಾಯಿತು.
ಆರೋಪಿಯನ್ನು ಪ್ರಶ್ನಿಸಲಾಗಿ, ಆತನು ಪರಿಚಯವಿಲ್ಲದವರಿಂದ ಕಡಿಮೆ ಬೆಲೆಗೆ ನಿಷೇದಿತ ಮಾಧಕ ವಸ್ತುವಾದ ಬಿಳಿ ಬಣ್ಣದ ಎಂ.ಡಿ.ಎಂ.ಎ ಕ್ರಿಸ್ಟಲ್‌ಗಳನ್ನು ಖರೀದಿಸಿದ್ದು, ಅವುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಅಕ್ರಮವಾಗಿ ಲಾಭವನ್ನು ಗಳಿಸುತ್ತಿದ್ದುದ್ದಾಗಿ ತಿಳಿಸಿರುತ್ತಾನೆ.
ದಿನಾಂಕ:16/06/2025 ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ, ಸಿಬ್ಬಂದಿಗಳು ಹಾಗೂ ಅವಲಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.
ವರದಿ : ಮುಬಾರಕ್ jk news ಕನ್ನಡ ಬೆಂಗಳೂರು