ಮಂಡ್ಯ ನಗರಸಭೆ: ಕಾಂಗ್ರೆಸ್ ಸದಸ್ಯನ ಬೆಂಬಲದಿಂದ ಬಿಜೆಪಿ- ಜೆಡಿಎಸ್ ಮೈತ್ರಿಗೆ ಗೆಲುವು

ಮಂಡ್ಯ: ಮಂಡ್ಯ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆಲವು ಸಾಧಿಸಿದೆ. ನಗರಸಭೆ ಅಧ್ಯಕ್ಷರಾಗಿ ಜೆಡಿಎಸ್ ನ ನಾಗೇಶ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬಿಜೆಪಿಯ ಅರುಣ್ ಕುಮಾರ್ ಆಯ್ಕೆಯಾಗಿದ್ದಾರೆ.

ಮಂಡ್ಯ ನಗರಸಭೆಯ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಇಂದು (ಆ.28) ನಡೆಯಿತು.

ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ಪ್ರವರ್ಗ-1ಕ್ಕೆ ಮೀಸಲಾಗಿತ್ತು. ಒಟ್ಟು 35 ಸದಸ್ಯರ ಪೈಕಿ ಜೆಡಿಎಸ್ 18, ಕಾಂಗ್ರೆಸ್ 10, ಬಿಜೆಪಿ 2 ಹಾಗೂ 5 ಪಕ್ಷೇತರ ಸದಸ್ಯರಿದ್ದರು. ಇವರೊಂದಿಗೆ ಕಾಂಗ್ರೆಸ್ ಶಾಸಕ ಪಿ.ರವಿಕುಮಾರ್ ಗಣಿಗ, ಸಂಸದ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ ಚಲಾಯಿಸುವ ಹಕ್ಕು ಪಡೆದಿದ್ದರು. ಹಾಗಾಗಿ ಒಟ್ಟು ಸದಸ್ಯರ ಸಂಖ್ಯೆ 37 ಆಗಿತ್ತು.

ಈ ಪೈಕಿ ಕಾಂಗ್ರೆಸ್ 10, ಜೆಡಿಎಸ್ 18, ಬಿಜೆಪಿ 2 ಹಾಗೂ ಪಕ್ಷೇತರ 5 ಸದಸ್ಯರು ಇದ್ದರು. ನಗರಸಭೆ ಗದ್ದುಗೆ ಏರಲು 19 ಮತಗಳು ಅನಿವಾರ್ಯವಾಗಿತ್ತು. ಹೀಗಾಗಿ ಕಾಂಗ್ರೆಸ್ ತಮ್ಮ 10 ಸದಸ್ಯರ ಜೊತೆಗೆ ಪಕ್ಷೇತರ 5 ಮಂದಿಯನ್ನು ಒಟ್ಟುಗೂಡಿಸಿ, ಶಾಸಕರ 1 ಮತದ ಜೊತೆಗೆ ಜೆಡಿಎಸ್ 3 ಸದಸ್ಯರನ್ನು ಆಪರೇಷನ್ ಮಾಡಿ 19 ಮತ ಪಡೆದು ಅಧಿಕಾರ ಹಿಡಿಯಲು ಮುಂದಾಗಿತ್ತು. ಕಾಂಗ್ರೆಸ್, ಜೆಡಿಎಸ್ ನ 3 ಸದಸ್ಯರನ್ನು ಆಪರೇಷನ್ ಮಾಡಿತು. ಇತ್ತ ಜೆಡಿಎಸ್, ಕಾಂಗ್ರೆಸ್ ನ ಓರ್ವ ಸದಸ್ಯನನ್ನು ಆಪರೇಷನ್ ಮಾಡಿತು.

error: Content is protected !!