ವಿಜಯಪುರ ನಗರದ ಹಂಚನಾಳ ಪಿ.ಎಚ್ ಗ್ರಾಮದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ನಿರ್ಮಾಣಗೊಂಡಿರುವ ಮನೆಗಳು ಹಾಗೂ ತೊರವಿ ಗ್ರಾಮದ ಹತ್ತಿರ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಾಣಗೊಂಡಿರುವ ಗುಂಪು ಮನೆಗಳನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆಗೆ ಕ್ರಮ ವಹಿಸುವಂತೆ ತಿಳಿಸಿದ ಅವರು, ನಿರ್ಮಾಣ ಹಂತದಲ್ಲಿರುವ ಗುಂಪು ಮನೆಗಳ ನಿರ್ಮಾಣ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಿ ಉಳಿದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ಅಜೀಜ ಪಠಾಣ.
