ಯಮಕನಮರಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಹೆಮ್ಮೆಯ ನಾಯಕರು, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಗೌರವಾನ್ವಿತ ಶ್ರೀ ರಾಹುಲ್ ಗಾಂಧಿ ಅವರಿಗೆ ಜನ್ಮದಿನದ ನಿಮಿತ್ಯವಾಗಿ
ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಹೊಸ ವಂಟಮೂರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಿದ್ದಪ್ಪಾ ಅಣ್ಣಾ ಹೂಳಿಕಾರ ಸಚಿವರ ಆಪ್ತ ಸಹಾಯಕರಾದ ಜಂಗ್ಲಿಸಾಬ ನಾಯಿಕ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಿದ್ದಿಕ್ ಅಂಕಲಗಿ ಯುವ ಕಾಂಗ್ರೆಸ್ ಅಧ್ಯಕ್ಷರು ಪ್ರಧಾನ ಗುರುಗಳಾದ ಎಮ್ ಎ ಕೊರಿಶೇಟ್ಟಿ ಎಮ್ ಎ ಮಾಹುತ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಸದಸ್ಯರು ಸುಕ್ಕಪ್ಪಾ ಪಕಾಲಿ ಸುರೇಶ್ ಜೀಂಡ್ರಾಳಿ ಗಣಪತಿ ಮಸ್ತಿ ನಿಂಗಪ್ಪ ಹೋಳಿಕಾರ ಸಂತೋಷ ಮೇಲ್ಗಡೇಮನಿ ಊರಿನ ಹಿರಿಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ : ಸದಾನಂದ ಎಂ