ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ಥಾಪಿಸಲಾದ ವಿಶೇಷ ಮಾಹಿತಿ ಕೇಂದ್ರ ಜಿಲ್ಲಾಧಿಕಾರಿ ಭೂಬಾಲನ್ ಉದ್ಘಾಟನೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರಪ್ರಥಮವಾಗಿ ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ಥಾಪಿಸಲಾದ ವಿಶೇಷ ಮಾಹಿತಿ ಕೇಂದ್ರವನ್ನು ಶುಕ್ರವಾರ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಉದ್ಘಾಟಿಸಿದರು.

ಈ ಮಾಹಿತಿ ಕೇಂದ್ರದಲ್ಲಿ ವಿಜಯಪುರ ಜಿಲ್ಲೆ ಮತ್ತು ವಿಜಯಪುರ ಕೇಂದ್ರ ಬಸ್ ನಿಲ್ದಾಣದಿಂದ ಕಾರ್ಯಚರಣೆ ಆಗುವ ಎಲ್ಲಾ ಬಸ್ಸುಗಳ ಮಾಹಿತಿ, ನಿಗಮದಿಂದ ದೊರೆಯುವ ಎಲ್ಲ ಸವಲತ್ತುಗಳ ಕುರಿತು ಪ್ರಯಾಣಿಕರಿಗೆ ಮಾಹಿತಿ ದೊರೆಯಲಿದೆ.

ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಸಾರಿಗೆ ಅಧಿಕಾರಿಗಳಾದ ಎಂ ಎಸ್ ಹಿರೇಮಠ್, ಬಸ್ ನಿಲ್ದಾಣದ ವ್ಯವಸ್ಥಾಪಕ ಕೆ.ಕೆ. ಹುಗ್ಗೆನವರ್ ಹಾಗೂ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ : ಅಜೀಜ ಪಠಾಣ.

error: Content is protected !!