ಅರಭಾವಿ, 21 ಜೂನ್ 2025:
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ, ಅರಭಾವಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ವಿವಿಧ ಗ್ರಾಮಗಳಲ್ಲಿ ವಿಜೃಂಭಣೆಯಿಂದ ಧ್ವಜಾರೋಹಣ ಕಾರ್ಯಕ್ರಮಗಳು ಆಯೋಜಿಸಲ್ಪಟ್ಟವು.
ಕಾರ್ಯಕ್ರಮವು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಬಾಬಾಲಾಲ ಮುಲ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಕಾರ್ಯದರ್ಶಿ ಮಾಜಿದ ಶೇಕ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಉಪಾಧ್ಯಕ್ಷ ಮಲಿಕ್ ಹುಲಿಕಟ್ಟಿ, ಪ್ರಧಾನ ಕಾರ್ಯದರ್ಶಿ ರಸೂಲಸಾಬ ಪಠಾನ, ಸಮಿತಿಯ ಎಲ್ಲಾ ಸದಸ್ಯರು, ಕಾರ್ಯಕರ್ತರು ಹಾಗೂ ಸ್ಥಳೀಯ ನಾಗರಿಕರು ಉತ್ಸಾಹಭರಿತವಾಗಿ ಭಾಗವಹಿಸಿದರು.
ಧ್ವಜಾರೋಹಣದ ನಂತರ SDPI ಪಕ್ಷದ ಧ್ಯೇಯೋದ್ದೇಶಗಳ ಕುರಿತು ಜಾಗೃತಿ ಭಾಷಣಗಳು ನಡೆದವು. ಸಮಾಜದಲ್ಲಿ ಸಮಾನತೆ, ನ್ಯಾಯ ಮತ್ತು ಶೋಷಿತ ವರ್ಗಗಳ ಹಕ್ಕುಗಳಿಗಾಗಿ ಪಾರ್ಟಿಯ ಶ್ರದ್ಧಾವಂತರ ಸೇವೆಯನ್ನು ಹುರಿದುಂಬಿಸಲಾಯಿತು.
ಕೌಜಲಗಿ, ಲಕ್ಷ್ಮೇಶ್ವರ, ಯಾದವಾಡ, ಸಂಗನಕೇರಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಧ್ವಜಾರೋಹಣ ನೆರವೇರಿಸಿ ಸಂಘಟನೆಯ ಶಕ್ತಿ ಪ್ರದರ್ಶಿಸಲಾಯಿತು.
ವರದಿ : ಅಕ್ರಮ ಜಮಾದಾರ್
