ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆಯಡಿ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮನೆಗಳ ಹಂಚಿಕೆ ಮತ್ತು ಮೂಲಭೂತ ಸೌಲಭ್ಯಗಳ ಕುರಿತ ಸಭೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್, ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ್ (ಯತ್ನಾಳ) , ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ , ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ : ಅಜೀಜ ಪಠಾಣ.