ಬೆಂಗಳೂರು ಮೂಲದ ಮಹಿಳೆ ಸೇರಿದಂತೆ ೭ ಮಂದಿ ಬಂಧನ.
ಹುಣಸೂರು; ಹಿಂದೂ ಸಂಘಟನೆ ಹೆಸರಿನಲ್ಲಿ ಜಾನುವಾರು ಸಂರಕ್ಷಣೆ ನೆಪದಲ್ಲಿ ಜಾನುವಾರು ಸಾಗಿಸುವ ವಾಹನಗಳ ತಡೆದು ಹಣ ವಸೂಲಿ ದಂಧೆಗಿಳಿದಿದ್ದ ಮಹಿಳೆ ಸೇರಿದಂತೆ ಏಳು ಮಂದಿ ತಂಡವನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, ಎರಡು ಕಾರುಗಳನ್ನು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಕಟ್ಟೆಮಳಲವಾಡಿಯಲ್ಲಿ ಜರುಗಿದೆ.
ಹಿಂದೂ ರಾಷ್ಟ್ರ ರಕ್ಷಣಾ ವೇದಿಕೆ ರಾಷ್ಟ್ರೀಯ ಅಧ್ಯಕ್ಷ ಬೆಂಗಳೂರು ಉತ್ತರಹಳ್ಳಿಯ ರಾಮಕೃಷ್ಣ ಮತ್ತು ಬೆಂಗಳೂರಿನ ವಿವಿಧ ಬಡಾವಣೆ ನಿವಾಸಿಗಳಾದ ಶಿವಕುಮಾರ್, ಲಿಂಗರಾಜು, ಕಿಶೋರ್, ಪ್ರೇಮಕುಮಾರ್, ಪುಷ್ಪಲತಾ ಹಾಗೂ ಕೆಆರ್ ಪೇಟೆ ತಾಲೂಕಿನ ಮಾರಗೌಡನಹಳ್ಳಿಯ ಸ್ವಾಮಿ ಬಂಧಿತರು. ಕೃತ್ಯಕ್ಕೆ ಬಳಸುತ್ತಿದ್ದ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ಆಗಿರೋದಿಷ್ಟು:
ತಾಲೂಕಿನ ರತ್ನಪುರಿಯ ಕಿರಣ್ ಬುಧವಾರದಂದು ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಸಂತೆಯಲ್ಲಿ ಮೂರು ಜಾನುವಾರುಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ತಾಲೂಕಿನ ಕಟ್ಟೆಮಳಲವಾಡಿ ಬಳಿ ಅಡ್ಡಗಟ್ಟಿ ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದೀರಾ ಎಂದು ಚಾಲಕ ಕಿರಣ್‌ನನ್ನು ಬೆದರಿಸಿ ೨೫ಸಾವಿರ ರೂ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ನಾನು ವ್ಯವಸಾಯಕ್ಕಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದೇನೆಂದು ಹೇಳಿದನಾದರೂ ಕೇಳದೆ ಕೊನೆಗೆ ೨೦ಸಾವಿರ ಕೊಟ್ಟರೆ ಬಿಡುತ್ತೇವೆ. ಇಲ್ಲದಿದ್ದರೆ ಪೊಲೀಸರಿಗೆ ಮಾಹಿತಿ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ.
ಈ ವೇಳೆ ಏನು ನಡೆಯುತ್ತಿದೆ ಎಂದು ರಸ್ತೆಯಲ್ಲಿ ಹೋಗುತ್ತಿದ್ದ ಜನರು ಜಮಾಯಿಸಿದರು. ವಿಷಯ ತಿಳಿದು ಜನರು ಆರೋಪಿಗಳ ವಿರುದ್ದ ತಿರುಗಿ ಬಿದ್ದು ತರಾಟೆ ತೆಗೆದುಕೊಂಡು ಗೂಸಾ ನೀಡಿ ೧೧೨ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಇವರ ಆಟಾಟೋಪ ಬಯಲಾಗಿದೆ. ಈ ಸಂಬAಧ ಕಿರಣ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಹಿಂದೂ ಸಂಘಟನೆ ಹೆಸರಲ್ಲಿ ಸೂಲಿದಂಧೆ:
ಇದೇ ತಂಡ ಕೆ.ಆರ್.ನಗರದಲ್ಲೂ ಗ್ಯಾಸ್ ಅಂಗಡಿಯೊAದರ ಮಾಲಿಕನನ್ನು ಬೆದರಿಸಿ ೨೦ಸಾವಿರ ರೂ ಕಿತ್ತಿದ್ದಾರೆ. ಚಾಮರಾಜನಗರದಲ್ಲಿ ಎರಡು ವರ್ಷಗಳ ಹಿಂದೆ ಹಾಗೂ ಬೆಂಗಳೂರಿನಲ್ಲೂ ಇದೀಗ ಹುಣಸೂರು ಮತ್ತು ಕೆ.ಆರ್.ನಗರ ಠಾಣೆಯಲ್ಲಿ ಇವರ ವಿರುದ್ದ ಪ್ರಕರಣ ದಾಖಲಾಗಿದೆ.
ಅಡಿಷನಲ್ ಎಸ್.ಪಿ.ಮಲ್ಲಿಕ್ ಭೇಟಿ ನೀಡಿ ವಿಚಾರಣೆ ನಡೆಸಿದರು. ಡಿವೈಎಸ್‌ಪಿ ಗೋಪಾಲಕೃಷ್ಣ, ಇನ್ಸ್ಪೆಕ್ಟರ್ ಮುನಿಯಪ್ಪ ಇದ್ದರು.
ಆರೋಪಿಗಳು ಕೃತ್ಯಕ್ಕೆ ಬಳಸುತ್ತಿದ್ದ ಕಾರಿನಲ್ಲಿ ಹಿಂದೂರಾಷ್ಟç ರಕ್ಷಣಾ ಪಡೆ ನಾಮಫಲಕ ಅಳವಡಿಸಿಕೊಂಡಿದ್ದರಲ್ಲದೆ. ಜೆ.ಕೆ.೨೪×೭ ಕನ್ನಡ ನ್ಯೂಸ್ ಚಾನಲ್ ಸ್ಟಿಕರ್ ಅಳವಡಿಸಿಕೊಂಡು ವಿವಿಧೆಡೆ ಹಣ ವಸೂಲಿಯನ್ನೇ ದಂದೆ ಮಾಡಿಕೊಂಡಿದ್ದರು. ರಾಮಕೃಷ್ಣ ತನ್ನ ಮೊಬೈಲ್ ನಲ್ಲಿ ಪುನಿತ್ ಕೆರೆಹಳ್ಳಿ ಜೊತೆ ಇರುವ ಪೊಟೋಗಳನ್ನು ಜಾನುವಾರು ಸಾಗಿಸುವವರಿಗೆ ತೋರಿಸಿ ಬೆದರಿಸುತ್ತಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ.