ಸುಪ್ರೀಂ ಕೋರ್ಟಿನ ತೀರ್ಪಿ ನಂತೆ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳಿಗೆ ನೀಡಿರುವ ಒಳ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಲು ಮಾದಿಗ ಸಂಘಟನೆಗಳ ಒಕ್ಕೂಟ ಆಗ್ರಹ

ಬೀಳಗಿ : ಸುಪ್ರೀಂ ಕೋರ್ಟಿನ ತೀರ್ಪಿ ನಂತೆ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳಿಗೆ ನೀಡಿರುವ ಒಳ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಬೀಳಗಿಯಲ್ಲಿ ಆಗಸ್ಟ್ 31 ರಂದು ಮಾದಿಗ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಹಿರಿಯ ಮುಖಂಡರಾದ ಶಿವಾನಂದ ಬಿಸನಾಳ.ಸೋಮುಚೂರಿ ತಿಳಿಸಿದರು ಬಿಳಗಿಯ ಜಿ ಎಲ್ ಬಿಸಿ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 30 ವರ್ಷಗಳವರೆಗೆ ಹೋರಾಟ ಮಾಡುತ್ತಾ ಬಂದಿರುವ ಮಾದಿಗರ ಮೀಸಲಾತಿ ಹೋರಾಟಕ್ಕೆ ಸುಪ್ರೀಂಕೋರ್ಟ್ ತೆರೆ ಎಳೆದಿದೆ.ಸರ್ವೋಚ್ಚೆ ನ್ಯಾಯಾಲಯದ ತೀರ್ಪುನಂತೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಲ್ಲಿನ ಒಳ ಮೀಸಲಾತಿಯ ಜಾರಿಗೊಳಿಸುವ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತಿದೆ ಎಂದು ತಿಳಿಸಿದರು. ಜೊತೆಗೆ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟದ ತೀರ್ಪನ್ನು ಕೂಡ ಸ್ವಾಗತಿಸಿದರು. ಹೀಗಾಗಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ರಾಜ್ಯಸರ್ಕಾರ ಕೂಡಲೇ ಮುಕ್ತ ಮನಸ್ಸಿನಿಂದ ಕಾರ್ಯ ಪ್ರವೃತ್ತರಾಗಿ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ತಿಳಿಸಿದರು. ಒಂದು ವೇಳೆ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸಿದರೆ ಮುಂಬರುವ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಸಮಾಜದ ಮೀಸಲಾತಿಗೆ ತೊಂದರೆ ಬರುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ಈಗಾಗಲೇ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ಗಮನಿಸಿ ರಾಜ್ಯ ಸರ್ಕಾರ ಕೂಡಲೇ ಈ ಆದೇಶವನ್ನು ಜಾರಿಗೊಳಿಸಬೇಕು ಹೀಗಾಗಿ ಈಗ ಕೂಡ ವಿಳಂಬವಾಗಿದ್ದು ಇನ್ನೂ ರಾಜ್ಯ ಸರ್ಕಾರ ವಿಳಂಬ ಮಾಡಬಾರದು ಎಂದು ಆಗ್ರಹಿಸಿ ಇದೇ ಆಗಸ್ಟ್ 31 ರಂದು ಬೀಳಗಿಯಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ಈ ಪ್ರತಿಭಟನೆಯಿಂದ ತಾಲೂಕ ದಂಡಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿಯನ್ನು ಕೊಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಶಿವಾನಂದ ಬಿಸನಾಳ. ಸೋಮು ಚೂರಿ, ಸಿದ್ದು ಮಾದರ್ .ನಾಗೇಶ್ ಸಿಡ್ಲನವರ್. ರಾಯಪ್ಪ ಬೀರಕಬ್ಬಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು .

 

ವರದಿ : ರಿಯಾಜ್ ಅತ್ತಾರ ಬೀಳಗಿ.