ಬೈಕ್ ಸಾವರನ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಡಿಕ್ಕಿಯಾಗಿರುವ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು

ವಿಜಯಪುರ ಜಿಲ್ಲೆಯ

ಬೈಕ್ ಸಾವರನ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಡಿಕ್ಕಿಯಾಗಿರುವ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆದಿದೆ.

ಬಸವನಬಾಗೇವಾಡಿ ಪಟ್ಟಣದ ವೀರೇಶ್ ಹಿರೇಮಠ್ (19) ಮೃತ ಯುವಕ.

ಅಲ್ಲದೇ, ಮತ್ತೋರ್ವ ಸವಾರನಿಗೆ ಸಣ್ಣಪುಟ್ಟ ಗಾಯಗಳು ಆಗಿದ್ದು, ಗಾಯಾಳು ಸವಾರನನ್ನು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರ ಭೇಟಿ ನೀಡಿ , ಪರಿಶೀಲನೆ ನಡೆಸಿದರು.

ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ವರದಿ : ಮಹಿಬೂಬ್ ಗುಂಠಕಲ್

error: Content is protected !!