ಘಟಪ್ರಭಾ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ ಅವರು
ಘಟಪ್ರಭಾ ಪಟ್ಟಣದ ಸೇವಾದಳದಲ್ಲಿ ಹಮ್ಮಿಕೊಂಡಿದ್ದ ಗೋಕಾಕ ಹಾಗೂ ಅರಭಾವಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ, ಪಕ್ಷ ಸಂಘಟನೆಯ ಕುರಿತು ಚರ್ಚೆ ನಡೆಸಿದರು.
ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಪಕ್ಷ ಸಂಘಟನೆಯ ಬಲವರ್ಧನೆಗೆ ಪ್ರತಿಯೊಬ್ಬರೂ ಶ್ರಮಿಸಿ, ಬೂತ್ ಮಟ್ಟದಿಂದಲೇ ಸಂಘಟಿತ ಕಾರ್ಯಚಟುವಟಿಕೆಗಳ ಮೂಲಕ ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸಲು ಕರೆ ನೀಡಿದರು.
ಪಾಶ್ಚಾಪೂರ ಗ್ರಾಮದಲ್ಲಿ ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಫಿಟ್ನೆಸ್ ಜಿಮ್ ಸೆಂಟರ್ ಉದ್ಘಾಟಿಸಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಊರಿನ ಗಣ್ಯಮಾನ್ಯರು ಮತ್ತೀತರು ಉಪಸ್ಥಿತರಿದ್ದರು.