ಚಿತ್ತಾಪುರ; ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ಈ ಭಾಗದ ನಾಗಾವಿ ನಾಡಿನಲ್ಲಿ ನಡೆದಾಡುವ ದೇವರಾಗಿದ್ದಾರೆ ಎಂದು ಮುಖಂಡ ಮಂಜುನಾಥ ಸ್ವಾಮಿ ಹೇಳಿದರು.
ಪಟ್ಟಣದ ಕಂಬಳೇಶ್ವರ ಮಠದಲ್ಲಿ ಗುರು ಪೂರ್ಣಿಮೆ ನಿಮ್ಮಿತ್ತ ಸೋಮಶೇಖರ ಶಿವಾಚಾರ್ಯರ ಪಾದಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಸೋಮಶೇಖರ ಶಿವಾಚಾರ್ಯರು ಕಲ್ಯಾಣ ಕರ್ನಾಟಕ ಭಾಗಕ್ಕಲ್ಲದೇ ಇಡೀ ರಾಜ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಮಠಕ್ಕೆ ಬರುವ ಪ್ರತಿಯೊಬ್ಬ ಭಕ್ತರಿಗೆ ಆಶಿರ್ವಾದ ನೀಡಿವುದರ ಮೂಲಕ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದರು.
ಗುರುವಿನ ದೆಸೆಯಿಂದ ನಮ್ಮ ಜೀವನದಲ್ಲಿ ನಾವು ಉತ್ತಮ ಕಾರ್ಯಗಳನ್ನು ಮಾಡಲು ಸಾಧ್ಯವಾಗುತ್ತದೆ. ಹಿಂದೆ ಗುರು, ಮುಂದೆ ಗುರಿ ಇರಬೇಕು ಎನ್ನುವುದನ್ನು ತೋರಿಸಿಕೊಟ್ಟವರೇ ಸೋಮಶೇಖರ ಶಿವಾಚಾರ್ಯರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೆಳೆ ನೂರಾರು ಭಕ್ತರು ಮಠಕ್ಕೆ ಆಗಮಿಸಿ ಶ್ರೀಗಳಿಗೆ ಪಾದ ಪೂಜೆ ಮಾಡುವುದರ ಮೂಲಕ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ನರಹರಿ ಕುಲಕರ್ಣಿ, ಇರಯ್ಯ ಸ್ವಾಮಿ ಸೇರಿದಂತೆ ಅನೇಕ ಮುಖಂಡರು, ಭಕ್ತರು ಇದ್ದರು
ವರದಿ ಮೊಹಮ್ಮದ್ ಅಲಿ ಚಿತ್ತಾಪುರ