ಜು. 30ರಂದು ಪತ್ರಿಕಾ ದಿನಾಚರಣೆ

ಚಿತ್ತಾಪುರ; ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ತಾ ಪುರ ತಾಲೂಕು ಸಮಿತಿ ವತಿಯಿಂದ ಜು. 30ರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಸಿದ್ದರಾಜ ಮಲ್ಕಂಡಿ ಅವರು ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 10;30 ಗಂಟೆಗೆ ಪಟ್ಟಣದ ತಾಲೂಕು ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ ಮತ್ತು ಐಟಿಬಿಟಿ ಹಾಗೂ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದಾರೆ. ರಾಯಚೂರಿನ ಉಪನ್ಯಾಸಕ ಹಾಗೂ ಪ್ರಗತಿಪರ ಚಿಂತಕ ಡಾ. ಚಂದ್ರಗಿರೀಶ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಮತ್ತು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಬಿಜೆಪಿ ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ತಹಶೀಲ್ದಾರ್ ನಾಗಯ್ಯ ಹಿರೇಮಠ, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸ್ಥಳೀಯ ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ನಾಗಪ್ಪ ಕಲ್ಲಕ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ರಾಜ್ಯ ಸಮಿತಿ ಸದಸ್ಯ ಡಾ. ಶಿವರಂಜನ್ ಸತ್ಯಂಪೇಟೆ, ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹ್ಮದ್ ಅಕ್ರಂ ಪಾಷಾ, ಬಿಇಓ ಶಶಿಧರ ಬಿರಾದಾರ ಹಾಗೂ ಇನ್ನಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹೀಗಾಗಿ ಮುಖಂಡರು, ಪತ್ರಕರ್ತರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು‌ ಎಂದು ಅವರು ಮನವಿ ಮಾಡಿದರು.

ವರದಿ ಮೊಹಮ್ಮದ್ ಅಲಿ ಚಿತ್ತಾಪುರ

error: Content is protected !!