ಅಥಣಿ: ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರ ಮಕ್ಕಳು ಮತ್ತು ಸುತ್ತಮುತ್ತಲಿನ ಸ್ಥಳೀಯ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಕಾರ್ಖಾನೆಯ ವತಿಯಿಂದ ಮಾಜಿ ಸಚಿವ ಹಾಗೂ ಮಾಜಿ ಶಾಸಕ ಶ್ರೀಮಂತ ಪಾಟೀಲ ಅವರು ನೂತನ ಶಾಲಾ ಬಸ್ಗೆ ಪೂಜೆ ಸಲ್ಲಿಸಿ, ಹಸಿರು ನಿಶಾನೆ ತೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಶ್ರೀಮಂತ ಪಾಟೀಲ, “ಸರ್ಕಾರಿ ಬಸ್ಗಳು ಸರಿಯಾದ ಸಮಯಕ್ಕೆ ಲಭ್ಯವಾಗದೆ ಇರುವುದರಿಂದ ಶಾಲಾ ಮಕ್ಕಳಿಗೆ ಶಾಲೆಗೆ ತಲುಪಲು ಅನಾನುಕೂಲವಾಗುತ್ತಿತ್ತು. ಇದನ್ನು ಮನಗಂಡು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಥಣಿ ಶುಗರ್ಸ್ ವತಿಯಿಂದ ಈ ಉಚಿತ ಶಾಲಾ ಬಸ್ಗೆ ಚಾಲನೆ ನೀಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಶಾಲೆಗೆ ತಲುಪಲು ಸಹಾಯ ಮಾಡುವುದಲ್ಲದೆ, ಅವರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದ ಅವರು ಮಕ್ಕಳ ಪ್ರಯಾಣವು ಪ್ರತಿದಿನ ಸುಖಕರ ಮತ್ತು ಸುಗಮವಾಗಲಿ” ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಯುವ ನಾಯಕ ಹಾಗೂ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀನಿವಾಸ ಪಾಟೀಲ ಸೇರಿದಂತೆ ಕಾರ್ಖಾನೆಯ ಸಿಬ್ಬಂದಿ ವರ್ಗ ಮತ್ತು ಗಣ್ಯರು ಉಪಸ್ಥಿತರಿದ್ದರು.
ವರದಿ : ಭರತೇಶ್ ನಿಡೋಣಿ