ಚಿತ್ತಾಪುರ; ಪತ್ರಿಕೆಗಳು ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಹೇಳಿದರು.
ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಿಕೆಗಳು ಓದಿ ದೊಡ್ಡ ದೊಡ್ಡ ಹುದ್ದೇಗಳನ್ನು ಅಲಂಕರಿಸಿದವರು ಕಾರ್ಯಕ್ರಮದ ವೇದಿಕೆಗಳಲ್ಲಿ ಹೇಳುತ್ತಾರೆ, ಪ್ರತಿದಿನ ನಾವು ಪತ್ರಿಕೆಗಳನ್ನು ಓದುವ ಹವ್ಯಾಸ ಇತ್ತು ಹೀಗಾಗಿ ನಾವು ಪ್ರತಿದಿನ ಪತ್ರಿಕೆಗಳು ಓದಿದ್ದರಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ದೊಡ್ಡ ಹುದ್ದೆಗಳನ್ನು ಅಲಂಕರಿಸಿದ್ದೇನೆ ಎಂದು, ಹೀಗಾಗಿ ಪತ್ರಿಕೆಗಳು ಓದುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದರು.
ಇತ್ತಿಚಿನ ದಿನಗಳಲ್ಲಿ ಸೋಸಿಯಲ್ ಮೀಡಿಯಾಗಳು ಹುಟ್ಟಿಕೊಂಡಿದ್ದರಿಂದ ಪತ್ರಿಕೆಗಳ ಓದುಗರ ಸಂಖ್ಯೆ ಕಡಿಮೆಯಾಗಿದೆ ಎಂದು ಕೆಲವರು ಹೇಳಿಕೊಳ್ಳುವುದರ ಜೊತೆಗೆ ಪತ್ರಿಕೆಗಳು ಮುಚ್ಚುವ ಹಂತಕ್ಕೆ ತಲುಪಿದೆ ಎನ್ನುಕೊಳ್ಳುತ್ತಿದ್ದಾರೆ, ಆದರೆ ಪತ್ರಿಕೆ ಓದುಗರ ಸಂಖ್ಯೆ ಕುಸಿದಿಲ್ಲ ಹೊರತಾಗಿ ಓದುಗರ ಸಂಖ್ಯೆ ಹೆಚ್ಚಾಗುವುದರ ಮೂಲಕ ಪತ್ರಿಕಾ ಮಾರಾಟ ಕೂಡ ಹೆಚ್ಚಾಗಿದೆ. ಹೀಗಾಗಿ ಪತ್ರಿಕೆಗಳು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ವಿಶ್ವಾಸ ವ್ಯಕ್ತ ಪಡಿಸಿದರು. ಪತ್ರಿಕೆಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಹಾಗೂ ಪ್ರಜಾಪ್ರಭುತ್ವದ ಕಾವಲು ನಾಯಿ, ಆದರೆ ಇಂದು ಅನೇಕ ಸಂಕಷ್ಟ ಹಾಗೂ ಸವಾಲುಗಳು ಎದುರಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಸಾಮಾಜಿಕ ಜವಾಬ್ದಾರಿಯನ್ನು ಮೆರೆಯದೆ ಜನರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಿ ಆಳುವ ವರ್ಗಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಗ್ರಾಮೀಣ ಭಾಗದ ಪತ್ರಕರ್ತರೇ ಪತ್ರಿಕೆಗಳ ಜೀವಾಳ ಅವರಿಗೆ ಸಾಕಷ್ಟು ಸಮಸ್ಯೆಗಳಿವೆ. ಈಗ ಹೋರಾಟದ ಪರಿಣಾಮವಾಗಿ ಗ್ರಾಮೀಣ ಭಾಗದ ಪತ್ರಕರ್ತರಿಗೆ ಬಸ್ ಪಾಸ್ ಯೋಜನೆ ಜಾರಿಯಾಗಿದೆ ಎಂದರು.
ರಾಯಚೂರನ ಪ್ರಗತಿಪರ ಚಿಂತಕ ಡಾ.ಚಂದ್ರಗಿರೀಶ್ ಮುಖ್ಯ ಭಾಷಣಕಾರರಾಗಿ ಮಾತನಾಡಿ, ಪ್ರಜಾತಂತ್ರದ ನಾಲ್ಕನೇ ಸ್ತಂಭವಾಗಿದ್ದ ಪತ್ರಿಕೆಗಳು ಸ್ವಾತಂತ್ರ್ಯ ಪೂರ್ವದಿಂದಲೂ ಹಲವಾರು ಸವಾಲುಗಳನ್ನು ಎದುರಿಸುತ್ತ ಸಾಮಾಜಿಕ ಬದಲಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ, ಪತ್ರಿಕೆಗಳು ಇವತ್ತಿಗೂ ತಮ್ಮ ವಿಶ್ವಾಸಾರ್ಹತೆ ಉಳಿಸಿಕೊಂಡಿವೆ ಎಂದು ಹೇಳಿದರು.
ಸರ್ಕಾರ ಪಂಚ ಗ್ಯಾರಂಟಿಗಳು ಮಾಡಿದಂತೆ ಪತ್ರಕರ್ತರಿಗೂ ಒಂದು ಗ್ಯಾರಂಟಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಮುಖ್ಯ ಅತಿಥಿಗಳಾಗಿ ಡಿವೈಎಸ್ಪಿ ಶಂಕರಗೌಡ ಪಾಟೀಲ, ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ರಾಜ್ಯ ಸಮಿತಿ ಸದಸ್ಯ ಡಾ.ಶಿವರಂಜನ ಸತ್ಯಂಪೇಟೆ, ಅಧ್ಯಕ್ಷತೆ ವಹಿಸಿದ್ದ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಸಿದ್ದರಾಜ ಮಲ್ಕಂಡಿ ಅವರು ಮಾತನಾಡಿದರು.
ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್, ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹ್ಮದ್ ಅಕ್ರಂ ಪಾಷಾ, ಸಿಪಿಐ ಚಂದ್ರಶೇಖರ ತಿಗಡಿ ಸೇರಿದಂತೆ ವಿವಿಧ ಪಕ್ಷಗಳ ಅನೇಕ ಮುಖಂಡರು, ವಿವಿಧ ಸಂಘಟನೆ ಪದಾಧಿಕಾರಿಗಳು ಸೇರಿದಂತೆ ತಾಲೂಕು ಮಟ್ಟದ ಪತ್ರಕರ್ತರು ಇದ್ದರು.
ಪತ್ರಕರ್ತ ಡಾ. ಸಾಯಬಣ್ಣ ಗುಡುಬಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪತ್ರಕರ್ತ ಜಗದೇವ ದಿಗ್ಗಾಂವಕರ್ ಸ್ವಾಗತಿಸಿದರು. ಪತ್ರಕರ್ತ ಮಡಿವಾಳಪ್ಪ ಹೇರೂರು ನಿರೂಪಿಸಿದರು. ಪತ್ರಕರ್ತ ರಾಯಪ್ಪ ಕೋಟಗಾರ್ ವಂದಿಸಿದರು.
ವರದಿ ಮೊಹಮ್ಮದ್ ಅಲಿ ಚಿತ್ತಾಪುರ