<25ಲಕ್ಷ ಮೌಲ್ಯದ 70 ಮೊಬೈಲ್ ಫೋನ್ಗಳು, 01 ಕಾರು ಮತ್ತು 01 ಆಟೋರಿಕ್ಷಾ ವಶ. ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ಸರಹದ್ದಿನ, ಪ್ರಗತಿ ನಗರದಲ್ಲಿ ವಾಸವಿರುವ ಪಿಯಾದುದಾರರು ದಿನಾಂಕ:13/07/2025 ರಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:10/07/2025 ರಂದು ಸಂಜೆ ಕೊಡ್ಲುಗೇಟ್ನಲ್ಲಿರುವ ಸ್ನೇಹಿತನ ಮನೆಗೆ ಹೋಗುವ ಸಲುವಾಗಿ ಎಲೆಕ್ಟ್ರಾನಿಕ್ ಸಿಟಿ ಬಿ.ಎಂ.ಟಿ.ಸಿ ಬಸ್ ನಿಲ್ದಾಣದಿಂದ ಬಸ್ ಹತ್ತುವ ಸಮಯದಲ್ಲಿ ನಾಲ್ವರು ಹುಡುಗರು ಪಿಂಾದುದಾರರನ್ನು ತಳ್ಳಾಡಿಕೊಂಡಿರುತ್ತಾರೆ. ಪಿಯಾದುದಾರರು ಸ್ವಲ್ಪ ದೂರ ಪ್ರಯಾಣ ಮಾಡಿದ ನಂತರ, ಜೇಬಿನಲ್ಲಿದ್ದ ಮೊಬೈಲ್ ಕಾಣಿಯಾಗಿರುವುದೆಂದು ತಿಳಿದುಕೊಂಡು, ಬಸ್ ಹತ್ತುವ ಸಮಯದಲ್ಲಿ ಪಿಯಾದುದಾರರನ್ನು ತಳ್ಳಾಟ ಮಾಡಿದ್ದ ಹುಡುಗರೇ ಮೊಬೈಲ್ ಫೋನ್ನ್ನು ಕಳವು ಮಾಡಿರುವುದಾಗಿ ಅನುಮಾನ ವ್ಯಕ್ತಪಡಿಸಿ, ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಳವು ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆ ಹಾಕಿ, ದಿನಾಂಕ:15/07/2025 ರಂದು ಎಲೆಕ್ಟ್ರಾನಿಕ್ ಸಿಟಿ ಹೊಸೂರು ಮುಖ್ಯ ರಸ್ತೆಯ ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಬಳಿ ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಮೊಬೈಲ್ ಫೋನ್ನ್ನು ಕಳವು ಮಾಡಿರುವುದಾಗಿ ಹಾಗೂ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿಯೂ ಮೊಬೈಲ್ ಫೋನ್ಗಳನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ. ಆರೋಪಿಗಳ ವಶದಲ್ಲಿದ್ದ 21 ಮೊಬೈಲ್ ಫೋನ್ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಎಂಟಿಗಾ ಕಾರನ್ನು ವಶಪಡಿಸಿಕೊಂಡಿರುತ್ತದೆ. ದಿನಾಂಕ:16/07/2025 ರಂದು ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 08 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು. ಪೊಲೀಸ್ ಅಭಿರಕ್ಷೆಗೆ ಪಡೆದ ಮೂವರು ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಿ, ಈ ಪ್ರಕರಣದಲ್ಲಿ ಇನ್ನೂ ನಾಲ್ವರು ಸಹಚರರು ಭಾಗಿಯಾಗಿರುವುದಾಗಿ ತಿಳಿಸಿ, ಅವರುಗಳ ಬಗ್ಗೆ ಮಾಹಿತಿಯನ್ನು ನೀಡಿರುತ್ತಾರೆ. ದಿನಾಂಕ:16/07/2025 ರಂದು ದೇವನಹಳ್ಳಿಯ ದೇವಗಾನಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ಮೂವರು ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ. ಅವರುಗಳ ವಶದಲ್ಲಿದ್ದ 49 ಮೊಬೈಲ್ ಪೋನ್ಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಆಟೋರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ದಿನಾಂಕ:17/07/2025 ರಂದು ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, 08 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು. ಈ ಪ್ರಕರಣದ ಆರು ಆರೋಪಿಗಳ ಬಂಧನದಿಂದ ಒಟ್ಟು 70 ಮೊಬೈಲ್ ಫೋನ್ಗಳು, | ಕಾರ್ ಮತ್ತು । ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಒಟ್ಟು ಮೌಲ್ಯ * 25,00,000/-(ಇಪ್ಪತ್ತೈದು ಲಕ್ಷ ರೂಪಾಯಿ) ಈ ಪ್ರಕರಣದ ಆರೋಪಿಗಳ ಬಂಧನದಿಂದ, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ 1 ಮೊಬೈಲ್ ಫೋನ್ ಕಳವು ಪ್ರಕರಣ ಪತ್ತೆಯಾಗಿರುತ್ತದೆ. ಉಳಿದ 69 ಮೊಬೈಲ್ ಫೋನ್, 1 ಕಾರ್, । ಆಟೋ ರಿಕ್ಷಾದ ಮಾಲೀಕರುಗಳು ಪತ್ತೆಯಾಗಬೇಕಾಗಿದ್ದು ಹಾಗೂ ಈ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಮತ್ತೋರ್ವ ವ್ಯಕ್ತಿಯ ಪತ್ತೆ ಕಾರ್ಯ ಸಹ ಮುಂದುವರೆದಿದೆ. ತನಿಖೆ ಪ್ರಗತಿಯಲ್ಲಿದೆ. ದಿನಾಂಕ:23/07/2025 ರಂದು ಪ್ರಕರಣದ ಆರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ. ಈ ಕಾರ್ಯಾಚರಣೆಯನ್ನು ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಉಪ ಪೊಲೀಸ್ ಆಯುಕ್ತರವರಾದ ಎಮ್ ನಾರಾಯಣ ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರವರಾದ ಕೆ.ಎಮ್ ಸತೀಶ್ ರವರ ನೇತೃತ್ವದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ನವೀನ್ ಜಿ.ಎಮ್ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.