2025/26ನೇ ಜೇರಟಗಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜೇರಟಗಿ ಬಾಲಕ ಮತ್ತು ಬಾಲಕಿಯರು ತ್ರೋಬಾಲ್ ನಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಮತ್ತು ಬಾಲಕರು ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಅದೇ ರೀತಿ ಗುರುಶಾಂತೇಶ್ವರ ಅನುದಾನಿತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಬಾಲಕಿಯರ ವಾಲಿಬಾಲ್ ಆಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಹಾಗೂ ಬಾಲಕರು ಥ್ರೋ ಬಾಲ್ ನಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎರಡು ಶಾಲೆಯ ಮುಖ್ಯ ಗುರುಗಳಾದ ಬಾಬುಗೌಡ ಪಾಟೀಲ್ ಅಶೋಕ್ ಬಿರಾದಾರ್ ಹಾಗೂ ಶಾಲೆಯ ಶಿಕ್ಷಕರಾದ ಗೀತಾ ಹಿರೇಮಠ ರಾಹುಲ್ ಶಿಕ್ಷಕರು ಸಿದ್ದಯ್ಯ ಸಹ ಶಿಕ್ಷಕರು ಹಾಗೂ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಸಂಜು ಕುಮಾರ್ ಮಳಗಿ ಮತ್ತು ಮಡಿವಾಳಯ್ಯ ಕೂಕನೂರ್ ಸೇರಿದಂತೆ ಎಲ್ಲಾ ಸಹ ಶಿಕ್ಷಕರು ಮುದ್ದು ಮಕ್ಕಳಿಗೆ ಅಭಿನಂದನೆ ಸಲ್ಲಿಸಿದರು