ಹುಮನಾಬಾದ್ : ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಹುಮನಾಬಾದ ಪಟ್ಟಣದಲ್ಲಿ ನಾಳೆ ಅಗಸ್ಟ್ 15 ರಂದು ಬೆಳಿಗ್ಗೆ 9:30ಕ್ಕೆ ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಪಥ ಸಂಚಲನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಮಾಜಿ ಸಚಿವರಾದ ರಾಜಶೇಖರ ಪಾಟೀಲ್ ರವರ ಗೃಹ ಕಚೇರಿಯಿಂದ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದ ವರೆಗೆ ತಿರಂಗಾ ಯಾತ್ರೆ ಜರುಗಲಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು
ರಾಜಶೇಖರ ಬಿ ಪಾಟೀಲ್ ಮಾಜಿ ಸಚಿವರು, ಕರ್ನಾಟಕ ಸರಕಾರ. ಅಫ್ಸರಮಿಯಾ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಸಮಿತಿ ಹುಮನಾಬಾದ ಓಂಕಾರ ತುಂಬಾ ಅಧ್ಯಕ್ಷರು, ಗ್ರಾಮೀಣ ಕಾಂಗ್ರೆಸ್ ಸಮಿತಿ ಹುಮ್ನಾಬಾದ್ ಉಮೇಶ ಜಮಗಿ ಅಧ್ಯಕ್ಷರು, ಯುವ ಕಾಂಗ್ರೆಸ್ ಸಮಿತಿ ಹುಮನಾಬಾದ ರವರು ಮನವಿ ಮಾಡಿದ್ದಾರೆ.