ಬೀದರ್: ದಕ್ಷಿಣ ಕ್ಷೇತ್ರದ ಬಿಜೆಪಿ ಪಕ್ಷದ ನೂತನ ಪದಾಧಿಕಾರಿಗಳ ನೇಮಕ ಬಳಿಕ ಮೊದಲ ಬಾರಿ ಪಕ್ಷ ಸಂಘಟನೆ ಕುರಿತು ನಾಳೆ ದಿ. ೩೧ರಂದು ಶನಿವಾರ ಕಾರ್ಯಕಾರಿಣಿ ಸಭೆ ಹಾಗೂ ೨೦೨೪ರ ಬಿಜೆಪಿ ಸದಸ್ಯತಾ ಅಭಿಯಾನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಸ್ಥಳ ಮನ್ನಾಏಖೇಳ್ಳಿ ಗ್ರಾಮದ ಮೀನಕೇರಾ ಕ್ರಾಸ್ ಬಳಿ ಇರುವ ವಿಜಯಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ೧೦:೩೦ ಕ್ಕೆ ಕಾರ್ಯಕಾರಿಣಿ ಸಭೆ ಮತ್ತು ಸದಸ್ಯತಾ ಅಭಿಯಾನ ನಡೆಯಲಿದೆ. ಉದ್ಘಾಟಕರಾಗಿ ರಾಜ್ಯ ಕಾರ್ಯದರ್ಶಿಗಳು, ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಅಧ್ಯಕ್ಷರಾದ ಸೋಮನಾಥ ಪಾಟೀಲ್, ರಾಷ್ಟ್ರೀಯ ಪದಾಧಿಕಾರಿಗಳು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಜಿಲ್ಲಾ ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿರುವರು.
ಈ ಕಾರ್ಯಕಾರಿಣಿ ಸಭೆಯಲ್ಲಿ ಮಂಡಲ ಪದಾಧಿಕಾರಿಗಳು ಎಲ್ಲಾ ಮೋರ್ಚಾ ಜಿಲ್ಲಾಧ್ಯಕ್ಷ ಪದಾಧಿಕಾರಿಗಳು, ಮಹಾ ಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕಾರಿಣಿ ಸಭೆ ಯಶಸ್ವಿಗೋಳಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷರಾದ ಗುರುನಾಥ ಎಂ ರಾಜಗೀರಾ ಬಗದಲ ಪ್ರಕಟಣೆ ಮೂಲಕ ತಿಳಿಸಿದ್ದಾರೆ.