ಬೆಳಗಾವಿ: ಮಳೆ ಅಬ್ಬರ – ನಾಳೆಯೂ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಳಗಾವಿ: ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ನಾಳೆಯು ಮಂಗಳವಾರ (ಆ-19) ಜಿಲ್ಲೆಯ 8 ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕರಾರಿ ಮೋಹಮ್ಮದ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.

ಬೆಳಗಾವಿ, ಬೈಲಹೊಂಗಲ, ಕಿತ್ತೂರ, ಖಾನಾಪುರ, ರಾಮದುರ್ಗ, ಸವದತ್ತಿ, ಚಿಕ್ಕೋಡಿ, ಹುಕ್ಕೇರಿ ತಾಲ್ಲೂಕಿನ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಇರಲಿದೆ.

ಅದೇ ರೀತಿ ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕಿನಲ್ಲಿ ಶಾಲೆಗಳ ಜತೆಗೆ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ವರದಿ Md ಸೋಹಿಲ ಭೈರಕದಾರ ಜೆಕೆ ನ್ಯೂಸ್ ಕನ್ನಡ ರಾಮದುರ್ಗ

error: Content is protected !!