3ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕನ್ನಡ ಪ್ರೌಢ ಶಾಲೆಯ ಉದ್ಘಾಟನೆ

ಯಮಕನಮರಡಿ : ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು. ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹುದಲಿ ಗ್ರಾಮದ ಕನ್ನಡ ಪ್ರಾಥಮಿಕ ಶಾಲಾ ಆವರಣದಲ್ಲಿ ಮಾನ್ಯ ಸಚಿವರಾದ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಹಾಗೂ ಲೋಕೋಪಯೋಗಿ ಇಲಾಖೆಯ ಅನುದಾನದಡಿ ಸುಮಾರು ₹3ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕನ್ನಡ ಪ್ರೌಢ ಶಾಲೆಯ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶಾಲಾ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳ ಕಲಿಕೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಹುದಲಿ ಗ್ರಾಮದ ಸುತಮುತ ಎಲ್ಲ ಗ್ರಾಮದ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂಬ ಆಶಯದಿಂದ ಈ ಕಾರ್ಯಕ್ಕೆ ಚಾಲನೆ ದೊರೆತಿದೆ” ಎಂದು ಹೇಳಿದರು.

ನಂತರ, ಅವರು ಮಹಾತ್ಮಾ ಗಾಂಧೀಜಿ ಭಾವನಕ್ಕೆ ಭೇಟಿ ನೀಡಿ, 1937ರಲ್ಲಿ ಹುದಲಿ ಗ್ರಾಮಕ್ಕೆ ಆಗಮಿಸಿ ಗಾಂಧೀಜಿ 7 ದಿನಗಳ ಕಾಲ ವಾಸ್ತವ್ಯ ಹೂಡಿದ ನೆನಪುಗಳನ್ನು ಸ್ಮರಿಸಿ, ಅವರ ಜೀವನ ಚರಿತ್ರೆಯ ಸಂಕ್ಷಿಪ್ತ ವೀಕ್ಷಣೆ ಮಾಡಿದರು.

ಈ ವೇಳೆ ಪಿಕೆಪಿಎಸ್ ಬ್ಯಾಂಕ್ ಆವರಣದಲ್ಲಿ ನೂತನ ಡಿಸಿಸಿ ಬ್ಯಾಂಕ್ ಶಾಖೆ ಉದ್ಘಾಟನೆಗೂ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅಂಕಲಗಿ ಶ್ರೀ ಅಡ್ಡಿವಿಸಿದ್ದೇಶ್ವರ ಮಠದ ಶ್ರೀ ಅಮರಸಿದ್ಧೇಶ್ವರ ಮಹಾ ಸ್ವಾಮಿಗಳು.ಸಚಿವರ ಆಪ್ತ ಸಹಾಯಕರಾದ ಶ್ರೀ ಅರವೀಂದ ಅಣ್ಣಾ ಕಾರ್ಚಿ.
ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶ್ರೀ ರಾಜು ಅಂಕಲಗಿ
ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು
ಶಿಕ್ಷಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಬೆಳಗಾವಿಯ ಹಿರಿಯ ಅಧಿಕಾರಿಗಳು ಜಿಲ್ಲಾ ಪಂ. ಸದಸ್ಯರು, ತಾ ಪಂ. ಸದಸ್ಯರು, ಗ್ರಾಮ ಪಂ. ಅಧ್ಯಕ್ಷರು ಹಾಗೂ ಸದಸ್ಯರು, ಪಿಕೆಪಿಎಸ್ ಅಧ್ಯಕ್ಷರು, ಉಪಾಧ್ಯಕ್ಷರು, ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಯುವ ನಾಯಕರು, ಮಂಚೂಣಿ ಘಟಕದ ಅಧ್ಯಕ್ಷರು ಹಾಗೂ ಕೆ.ಡಿ.ಪಿ ಸದಸ್ಯರು,ಎಸ್.ಡಿ.ಎಮ್.ಸಿ.ಅಧ್ಯಕ್ಷರು ಉಪಾಧ್ಯಕ್ಷರು .ಸದಸ್ಯರು ಮಾಜಿ ಸೈನಿಕರು.
ಹುದಲಿ ಜಿಲ್ಲಾ ಪಂ ವ್ಯಾಪ್ತಿಯ ಎಲ್ಲಾ ಗ್ರಾಮದ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

ವರದಿ : ಸದಾನಂದ ಎಂ

error: Content is protected !!