ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ 5.80 ಲಕ್ಷ ಮೌಲ್ಯದ 09 ದ್ವಿ-ಚಕ್ರ ವಾಹನಗಳ ವಶ

ಬೆಂಗಳೂರು : ಕಾಡುಗೋಡಿ ಪೊಲೀಸ್ ಠಾಣೆ ಸರಹದ್ದಿನ ಹೆಚ್.ಎ.ಎಲ್ ಹತ್ತಿರ ವಾಸವಿರುವ ಪಿರಾದುದಾರರು ದಿನಾಂಕ:29/04/2024 ರಂದು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ.

ದೂರಿನಲ್ಲಿ ಪಿರಾದುದಾರರು ದಿನಾಂಕ:28/04/2024 ರಂದು ಕಾಡುಗೋಡಿಯ ರೈಲ್ವೆ ನಿಲ್ದಾಣದ ಬಳಿ ದ್ವಿ-ಚಕ್ರ ವಾಹನವನ್ನು ನಿಲ್ಲಿಸಿ ಹೋಗಿರುತ್ತಾರೆ.

ಮಾರನೆ ದಿನ ಬೆಳಿಗ್ಗೆ ಬಂದು ದ್ವಿ-ಚಕ್ರ ವಾಹನವನ್ನು ನೋಡಲಾಗಿ, ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ತಿಳಿಸಿರುತ್ತಾರೆ. ಈ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಭಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆ ಹಾಕಿ, ದಿನಾಂಕ:20/08/2025 ರಂದು ಚನ್ನಸಂದ್ರದ ಎಫ್.ಸಿ.ಐ ರಸ್ತೆ ಬಳಿ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಕಳುವಾಗಿದ್ದ ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ಆತನ ಸಹಚರನೊಂದಿಗೆ ಸೇರಿಕೊಂಡು ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಹಾಗೂ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿಯೂ ಸಹ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ.

ಆರೋಪಿಯನ್ನು ಸುಧೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಕಳವು ಮಾಡಿದ ದ್ವಿ-ಚಕ್ರ ವಾಹನಗಳನ್ನು ಕಾಡುಗೋಡಿಯ ರೈಲ್ವೆ ನಿಲ್ದಾಣ ಹಾಗೂ ದಿಣ್ಣೂರು ಮುಖ್ಯ ರಸ್ತೆಯ ಮಸೀದಿ ಬಳಿ ಇರುವ ಖಾಲಿ ಜಾಗದಲ್ಲಿ ನಿಲ್ಲಿಸಿರುವುದಾಗಿ ತಿಳಿಸಿದ್ದು, ದಿನಾಂಕ:21/08/2025 ರಂದು 08 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.

ಈ ಪ್ರಕರಣದ ಆರೋಪಿಯ ವಶದಿಂದ ಒಟ್ಟು 09 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಒಟ್ಟು ಮೌಲ್ಯ 5,80,000/-(ಐದು ಲಕ್ಷದ ಎಂಬತ್ತು ಸಾವಿರ ರೂಪಾಯಿ).

ಪ್ರಕರಣದ ಆರೋಪಿ ಬಂಧನದಿಂದ 1) ಕಾಡುಗೋಡಿ ಪೊಲೀಸ್ ಠಾಣೆಯ-2 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, 2) ಹೆಚ್.ಎ.ಎಲ್ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 3) ಸರ್ಜಾಪುರ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, ಸೇರಿದಂತೆ 04 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. ಉಳಿದ 05 ದ್ವಿ-ಚಕ್ರ ವಾಹನಗಳ ಮಾಲೀಕರ ಪತ್ತೆ ಕಾರ್ಯ ಮುಂದುವರೆದಿದೆ. ಹಾಗೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಸಹಚರನು ತಲೆಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ಮುಂದುವರೆದಿದೆ. ತನಿಖೆ ಪ್ರಗತಿಯಲ್ಲಿದೆ.

05:21/08/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.

ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರಾದ ಕೆ.ಪರಶುರಾಮ್, ಐಪಿಎಸ್, ವೈಟ್ ಫೀಲ್ಡ್ ಉಪ ವಿಭಾಗ, ಸಹಾಯಕ ಪೊಲೀಸ್ ಕಮಿಷನರ್, ರೀನಾ ಸುವರ್ಣ, ವೈಟ್ ಪೀಲ್ಡ್ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಕಾಡುಗೋಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರಂಗಸ್ವಾಮಿ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

error: Content is protected !!